ಬೆಂಗಳೂರು:- ತಮಿಳಿನಿಂದ ಕನ್ನಡ ಎಂಬ ನಟ ಕಮಲ್ ಹಾಸನ್ ಹೇಳಿಕೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ನನಗೆ ಓದಲು ಇಷ್ಟವಿಲ್ಲ: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಸೂಸೈಡ್!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಮಲ್ ಹಾಸನ್ ನನಗೆ ಬಹಳ ಇಷ್ಟ. ನನ್ನ ತಂದೆ ಮತ್ತು ಕಮಲ್ ಅವರ ಸಂಬಂಧ ಬೇರೆ. ಅದಕ್ಕಾಗಿ ನಾನು ಅವರ ಅಭಿಮಾನಿಯಲ್ಲ. ನಾನು ಕಮಲ್ ಅವರನ್ನು ನನಗೆ ಸ್ಪೂರ್ತಿ ಎಂದು ಭಾವಿಸಿದ್ದೇನೆ. ನಮ್ಮನ್ನ ಅವರ ಕಾರ್ಯಕ್ರಮಕ್ಕೆ ಕರೆದಿದ್ದರು. ಹೀಗಾಗಿ ಹೋದ್ವಿ- ಬಂದ್ವಿ ಅಷ್ಟೇ ಎಂದರು.
ಬರೀ ಬಾಯಿಯಲ್ಲಿ ಮಾತ್ರ ಕನ್ನಡ ಕನ್ನಡ ಅನ್ನಬಾರದು. ಕನ್ನಡಕ್ಕಾಗಿ ನಾನು ಹೋರಾಟ ಮಾಡುತ್ತೇನೆ, ಕನ್ನಡಕ್ಕಾಗಿ ನಾನು ಸಾಯುತ್ತೇನೆ. ಕನ್ನಡ ಅಂತೀರಾ, ಸ್ಟಾರ್ ನಟರಿಗೆ ಮಾತ್ರ ಬೆಂಬಲಿಸೋದು. ಹೊಸಬರನ್ನೂ ಕೂಡ ಬೆಳೆಸಬೇಕು. ಕಮಲ್ ಹಾಸನ್ ಅವರಿಗೆ ಇದೆಲ್ಲ ಗೊತ್ತಾಗುತ್ತದೆ. ಅವರೇ ಅದನ್ನು ಸರಿ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.