ತಮಿಳಿಂದ ಕನ್ನಡ ಭಾಷೆ ಹುಟ್ಟಿದ್ದು ಎಂಬ ನಟ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಟ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ.
ಮದ್ದೂರು ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಅಮಾನತಿಗೆ ಶಾಸಕ ಕೆ.ಎಂ.ಉದಯ್ ಸೂಚನೆ
ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಆಕ್ರೋಶದ ಕಟ್ಟೆಯೊಡೆದಿದೆ. ನಟ ಕ್ಷಮೆ ಕೇಳಲ್ಲ ಎಂದು ಹೇಳಿದ ಬೆನ್ನಲ್ಲೇ ಅವರ ಭಾವಚಿತ್ರದ ಬ್ಯಾನರ್ಗೆ ಬೆಂಕಿ ಹಚ್ಚಿ ಕನ್ನಡಾಭಿಮಾನಿ ಪ್ರತಿಭಟಿಸಿದ್ದಾರೆ.
ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪವಿತ್ರ ಪ್ಯಾರಡೈಸ್ ಸಿಗ್ನಲ್ ಬಳಿ ಈ ಘಟನೆ ನಡೆದಿದ್ದು, ರಾತ್ರೋ ರಾತ್ರಿ ಓರ್ವ ಕನ್ನಡಾಭಿಮಾನಿ ಕಮಲ್ ಹಾಸನ್ ಹೇಳಿಕೆಗೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಕಮಲ್ ಹಾಸನ್ ಅವರ ಭಾವಚಿತ್ರದ ಬ್ಯಾನರ್ಗೆ ಬೆಂಕಿ ಹಚ್ಚಿ ಕಿಡಿಕಾರಿದ್ದಾರೆ. ಫೋಟೋಗೆ ಬೆಂಕಿ ಹಚ್ಚಿದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ನೀರು ಹಾಕಿ ಬ್ಯಾನರ್ನ್ನು ರಸ್ತೆಯಿಂದ ತೆಗೆದು ಹಾಕಿದ್ದಾರೆ.