ಕನ್ನಡ ತಮಿಳುಭಾಷೆಯಿಂದ ಹುಟ್ಟಿದ್ದು ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟು ಕನ್ನಡಿಗರನ್ನು ಕೆರಳಿಸಿರುವ ಕಮಲ್ ಹಾಸನ್ ರಾಜ್ಯಸಭೆ ಪ್ರವೇಶಿಸಲು ಸಿದ್ದರಾಗಿದ್ದಾರೆ. ತಮಿಳುನಾಡಿನ ಆಡಳಿತರೂಢ ಪಕ್ಷ ಡಿಎಂಕೆ ಬೆಂಬಲದೊಂದಿಗೆ ಕಮಲ್ ರಾಜ್ಯಪ್ರವೇಶಿಸಲಿದ್ದಾರೆ. ಜೂನ್ 19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ತಮಿಳುನಾಡಿನ ಡಿಎಂಕೆ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪಕ್ಷದ ಮೈತ್ರಿ ಕೂಟದ ಕಮಲ್ ಹಾಸನ್ ಹೆಸರು ಕೂಡ ಇದೆ.
2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದ ಮಕ್ಕಳ್ ನೀಧಿ ಮಯ್ಯಮ್ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್, ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕಾಗಿ ಭಾರೀ ಪ್ರಚಾರ ಮಾಡಿದ್ದರು. ಈ ಮೈತ್ರಿಕೂಟ ತಮಿಳುನಾಡಿನ ಎಲ್ಲಾ 39 ಸ್ಥಾನಗಳು ಮತ್ತು ಪುದುಚೇರಿಯ ಒಂದು ಸ್ಥಾನ ಗೆದ್ದುಕೊಂಡಿತ್ತು. ತನ್ನ ಶಾಸಕ ಬಲದ ಆಧಾರದ ಮೇಲೆ ಆರು ರಾಜ್ಯಸಭಾ ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿರುವ ಡಿಎಂಕೆ, ಒಪ್ಪಂದದಂತೆ ಕಮಲ್ ಹಾಸನ್ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.
ಡಿಎಂಕೆ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ ಸಲ್ಮಾ, ಪಿ. ವಿಲ್ಸನ್, ಎಸ್.ಆರ್. ಶಿವಲಿಂಗಂ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳಾಗಿ ಆಯ್ಕೆ ಆಗಿದ್ದಾರೆ. ಇದರ ಜೊತೆ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯಂ ಪಕ್ಷಕ್ಕೆ ಒಂದು ಸ್ಥಾನ ನೀಡಲಾಗಿದೆ. ಈ ಪಕ್ಷದಿಂದ ಕಮಲ್ ಹಾಸನ್ ಅವರನ್ನು ಆಯ್ಕೆ ಮಾಡಿರೋದಾಗಿ ಡಿಎಂಕೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
కమలహాసన్ను రాజ్యసభ అభ్యర్థుడిగా ప్రకటించిన డీఎంకే గతంలో చేసుకున్న ఒప్పందం ప్రకారం 4 రాజ్యసభ సీట్లలో ఒక సీటును కమలహాసన్ స్థాపించిన మక్కల్ నీది మయ్యం (ఎంఎన్ఎం) పార్టీకి కేటాయించిన డీఎంకే అధినేత స్టాలిన్#Kamalhassan #DMK pic.twitter.com/2zBBHSzrDA
— Voice of Andhra (@VoiceofAndhra3) May 28, 2025