ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ‘ಕಾಂತಾರ: ಚಾಪ್ಟರ್ 1’ ಚಿತ್ರದ ಜೂನಿಯರ್ ಆರ್ಟಿಸ್ಟ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಮೃತ ದುರ್ಧೈವಿಯಾಗಿದ್ದು,
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಂ ಸ್ಟೇಯಲ್ಲಿ ಮೃತಪಟ್ಟಿದ್ದಾರೆ. ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದ ವಿಜು ಅವರಿಗೆ ನಿನ್ನೆ ರಾತ್ರಿ ಏಕಏಕಿ ಎದೆ ನೋವು ಕಾಣಿಸಿಕೊಂಡಿದೆ.
ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ