ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಗಡಿ ಉಸ್ತುವಾರಿ ಸಚಿವರನ್ನ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಿದೆ
ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರನ್ನು ಮತ್ತೊಮ್ಮೆ ಗಡಿ ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದ್ದು, ಹೆಚ್.ಕೆ.ಪಾಟೀಲ್‌ರಿಗೆ ಕರ್ನಾಟಕ ಗಡಿ ಮತ್ತು ನದಿಗಳ ಸಂಬಂಧಿಸಿದಂತೆ ವಿವಾದ ಕುರಿತು ನಿಗಾವಹಿಸುವ ಜವಾಬ್ದಾರಿ ನೀಡಲಾಗಿದೆ.
ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು – ಕಾರಿನ ಮುಂಭಾಗ ಸಂಪೂರ್ಣ ಜಖಂ!
ಕೆಲ ದಿನಗಳ ಹಿಂದೆಯಷ್ಟೇ ಮಹಾರಾಷ್ಟ್ರ ಸಿಎಂ ನೇತೃತ್ವದ ಗಡಿ ಉನ್ನತಾಧಿಕಾರಿಗಳ ಸಮಿತಿ ರಚನೆ ಮಾಡಿತ್ತು. ಆಗಿನಿಂದಲೂ ಗಡಿ ಉಸ್ತುವಾರಿ ಸಚಿವರ ನೇಮಕಕ್ಕೆ ಕನ್ನಡ ಹೋರಾಟಗಾರರು ಸರ್ಕಾರಕ್ಕೆ ಒತ್ತಾಯಿಸಿದ್ದರು. 2013ರಲ್ಲಿ ಸಿಎಂ ಸಿದ್ದರಾಮಯ್ಯ ಗಡಿ ಉಸ್ತುವಾರಿ ಸಚಿವರ ನೇಮಕ ಮಾಡಿದ್ದರು. ಆಗಲೂ ಗಡಿ ಉಸ್ತುವಾರಿ ಸಚಿವರಾಗಿ ಎಚ.ಕೆ.ಪಾಟೀಲ್ ಅವರಿಗೆ ಜವಾಬ್ದಾರಿ ಕೊಡಲಾಗಿತ್ತು
2018 ರ ಬಳಿಕ ಬಂದ ಸರ್ಕಾರಗಳು ಗಡಿ ಉಸ್ತುವಾರಿ ಸಚಿವರ ನೇಮಕಕ್ಕೆ ಆಸಕ್ತಿ ತೋರಿಸಿರಲಿಲ್ಲ. ಈಗ ಮತ್ತೆ ಹೆಚ್.ಕೆ.ಪಾಟೀಲ್‌ಗೆ ಜವಾಬ್ದಾರಿ ಹೊರಿಸುವ ಮೂಲಕ ಕನ್ನಡಿಗರ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ.