ಬೆಂಗಳೂರು: ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ವಿರುದ್ಧ ಕಾಂಗ್ರೆಸ್ ಪಾಳೆಯದಲ್ಲಿ ಕೊತ ಕೊತ ಅಂತ ಕುದಿಯುತ್ತಿದೆ.
ಬಿಜೆಪಿ ವಿರುದ್ಧ ಪೇ ಸಿಎಂ ಅಭಿಯಾನ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಗೆ ಬಸವರಾಜ ರಾಯರಡ್ಡಿ ಹೇಳಿಕೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ನಿಶ್ಚಿತವಾಗಿ ಇದು ಸರ್ಕಾರಕ್ಕೆ ಮುಜುಗರದ ವಿಚಾರ. ರಾಯರಡ್ಡಿ ವಿರುದ್ಧ ಪಕ್ಷ ಕ್ರಮ ತೆಗೆದುಕೊಳ್ಳುತ್ತೆ ಅಂತ ಸಚಿವ ಎಂ.ಬಿ ಪಾಟೀಲ್ ಸುಳಿವು ನೀಡಿದ್ದಾರೆ.
ರಾಯರೆಡ್ಡಿ ಯಾವ ಅರ್ಥದಲ್ಲಿ ಹೇಳಿದ್ದಾರೆ, ಅವರೇ ವಿವರಣೆ ನೀಡಬೇಕು. ಪಕ್ಷಕ್ಕಿಂತ ಯಾರು ದೊಡ್ಡವರಲ್ಲ. ನಿನ್ನೆಯೇ ಯೂಟರ್ನ ಹೊಡೆದ್ರು ಅಂತ ಕೇಳಿದೆ ಅನ್ನೂ ಮೂಲಕ ರಾಯರಡ್ಡಿ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ.