ಬೆಂಗಳೂರು:- ಕರ್ನಾಟಕದ ಹಲವೆಡೆ ಮಳೆ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನವಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ, ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳ ಕಾಲ ತಾಪಮಾನ ಸ್ಥಿರವಾಗಿರುತ್ತದೆ. ಆದರೆ ನಂತರ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ ಕೆಲವು ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಹೆಚ್ಚಳವಾಗಲಿದೆ, ಆದರೆ ಕರಾವಳಿ ಕರ್ನಾಟಕದ ತಾಪಮಾನ 5 ದಿನಗಳವರೆಗೆ ಸ್ಥಿರವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಕರ್ನಾಟಕದ ಒಳನಾಡಿನಲ್ಲಿ ಮುಂದಿನ ದಿನಗಳಲ್ಲಿ ಕನಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆಯಿದೆ. ಕಲಬುರ್ಗಿಯಲ್ಲಿ ಗರಿಷ್ಠ 38.2 ಡಿಗ್ರಿ ಸೆಲ್ಸಿಯಸ್ ಮತ್ತು ಚಾಮರಾಜನಗರದಲ್ಲಿ ಕನಿಷ್ಠ 19.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.