ಕಾರವಾರ:- ಇಂದು ಬೆಳ್ಳಂ ಬೆಳಗ್ಗೆ ಎಕ್ಸಿಸ್ ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ಜರುಗಿದೆ.
ಕುಮಟಾ ಸನ್ಮಾನ ಹೊಟೆಲ್ ಪಕ್ಕ ಇರುವ ಎಕ್ಸಿಸ್ ಬ್ಯಾಂಕ್ ನಲ್ಲಿ ಇಂದು ಬೆಳಿಗ್ಗೆ ವಿದ್ಯುತ್ ಅವಘಡ ದಿಂದ ಬೆಂಕಿ ಹೊತ್ತಿಕೊಂಡಿದೆ. ಘಟನೆಯಿಂದ ಬ್ಯಾಂಕ್ ನ ಯಂತ್ರೋಪಕರಣಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ.
ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.