ಚಿತ್ರದುರ್ಗ:- ಇಲ್ಲಿನ ವಿವಿಧೆಡೆ ಜೂಜಾಟದಲ್ಲಿ ತೊಡಗಿದ್ದ 575 ಜೂಜುಕೋರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಟ್ಟು 108 ಪ್ರಕರಣಗಳು ದಾಖಲಾಗಿದ್ದು, 7.40 ಲಕ್ಷ ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆ ಅನೇಕರು ಜೂಜಾಟದಲ್ಲಿ ತೊಡಗಿದ್ದರು. ಈ ವೇಳೆ ದಾಳಿ ನಡೆಸಿದ ಪೊಲೀಸರು 575 ಜೂಜುಕೋರರನ್ನು ವಶಕ್ಕೆ ಪಡೆದಿದ್ದಾರೆ.
ಜೂಜಾಟದಲ್ಲಿ ತೊಡಗಿದ್ದವರ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ