ಯಾದಗಿರಿ: ಹುಣಸಗಿ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ಸಾಲದ ವಿಚಾರಕ್ಕೆ ಮಾವ ಅಳಿಯನನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. 28 ವರ್ಷದ ಲಕ್ಷ್ಮಣ ಚಿಗರಿಹಾಳ ಮೃತ ದುರ್ದೈವಿ.
ಸೋದರ ಮಾವ ಮಾನಪ್ಪ ಕೊಲೆ ಮಾಡಿದ ಆರೋಪಿ. ಕೊಟ್ಟ ಸಾಲ ವಾಪಸ್ ಕೊಡುವಂತೆ ಕೇಳಿದ್ದಕ್ಕೆ ಲಕ್ಷ್ಮಣ ಚಿಗರಿಹಾಳ ಮಾವ ಮಾನಪ್ಪಗೆ ಕೇಳಿದ್ದರು. ಇಷ್ಟಕ್ಕೆ ಬಹಿರ್ದೆಸೆಗೆ ತೆರಳುತ್ತಿದ್ದ ಅಳಿಯ ಲಕ್ಷ್ಮಣ ಚಿಗರಿಹಾಳನನ್ನು ಕೊಡಲಿಯಿಂದ ಕೊಚ್ಚಿ ಮಾವ ಮಾನಪ್ಪ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್, ಡಿವೈಎಸ್ಪಿ ಜಾವೀದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಾನಪ್ಪನನ್ನು ಪೋಲಿಸರು ಬಂಧಿಸಿದ್ದಾರೆ.