ಐಪಿಎಲ್ 2025 ರ ಆರನೇ ಪಂದ್ಯವು ಗುವಾಹಟಿಯ ಬರ್ಸಪಾರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇಂದು ರಾಜಸ್ಥಾನ ರಾಯಲ್ಸ್ ಮತ್ತು ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ.
ಎರಡೂ ತಂಡಗಳು ಈ ಪಂದ್ಯದಲ್ಲಿ ತಮ್ಮ ಮೊದಲ ಗೆಲುವನ್ನು ಎದುರು ನೋಡಲಿವೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ ಅದ್ಭುತವಾಗಿ ಬ್ಯಾಟಿಂಗ್ ಮಾಡಿತ್ತು ಆದರೆ ಬೌಲರ್ಗಳ ಪ್ರದರ್ಶನ ಉತ್ತಮವಾಗಿರಲಿಲ್ಲ. ಮತ್ತೊಂದೆಡೆ, ಕೋಲ್ಕತ್ತಾ ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಫಲವಾಯಿತು.
ಟಾಸ್ ಗೆದ್ದ ಕೆಕೆಆರ್ ನಾಯಕ ಅಜಿಂಕ್ಯಾ ರಹಾನೆ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ರಾಜಸ್ಥಾನ್ ಮೊದಲು ಬ್ಯಾಟಿಂಗ್ ಆರಂಭವಾಗಿದೆ.
RR vs KKR: ರಾಜಸ್ಥಾನ ರಾಯಲ್ಸ್ ತಂಡ
ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮಾಯೆರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ
RR vs KKR: ಕೋಲ್ಕತ್ತಾ ನೈಟ್ ರೈಡರ್ಸ್ ತಂಡ
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಮೋಯಿನ್ ಅಲಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.