ಮುಳಬಾಗಿಲು: ಮಹಿಳೆಯರು ಧೀರ್ಘ ಸುಮಂಗಲಿಯಾಗಿ ಸುಖ ಸಂತೋಷ ಆರೋಗ್ಯದಿಂದ ಬಾಳ ಬೇಕೆಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ಮುಳಬಾಗಿಲು ತಾಲೂಕಿನ ಬೈರಕೂರು ಸಮೀಪ ಶ್ರೀ ಘಟ್ಟು ವೆಂಕಟರಮಣಸ್ವಾಮಿ ದೇವಾಲಯದಲ್ಲಿ,
ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ನಿಮಗೆ ಅನಾರೋಗ್ಯ ಕಾಡುತ್ತೆ..! ಇದನ್ನು ನೀವೂ ನಂಬಲೆಬೇಕು
ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಿದ್ದ ಧೀರ್ಘ ಸುಮಂಗಲಿ ಭವ ಅಡಿಯಲ್ಲಿ ಹೆಣ್ಣು ಮಕ್ಕಳಿಗೆ ಮಡಿಲು ತುಂಬುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು, ಮಹಿಳೆಯರಿಗೆ ಗೌರವ ನೀಡುವ ಉದ್ದೇಶದಿಂದ ರಾಜ್ಯದಲ್ಲೇ ಮೊದಲ ಬಾರಿಗೆ ಮಡಿಲು ತುಂಬುವ ಕಾರ್ಯಕ್ರಮ ನಡೆಸಲಾಗುತ್ತಿದೆ.
ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ರಾಜಕೀಯ ಶಕ್ತಿ ನೀಡುವ ಕೆಲಸ ಮಾಡುತ್ತಿದೆ. ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಆರನೇ ಗ್ಯಾರಂಟಿ ಧೀರ್ಘ ಸುಮಂಗಲಿ ಭವ ಎಂದರು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮಹಿಳಾ ಮುಖಂಡರನ್ನು ಗುರುತಿಸಿ ಅವರಿಗೆ ಸ್ಥಾನಮಾನ ಹಾಗೂ ಅಭ್ಯರ್ಥಿಯಾಗಿ ಮಾಡಲಾಗುತ್ತದೆ ಎಂದು ಹೇಳಿದರು.