ಮಾಲೂರ : ಕಲ್ಲು ಕ್ರಷರ್ ನಲ್ಲಿ ಅವಘಡ ಸಂಭವಿಸಿ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ನಂದಾ ಲಾಲ್ (35) ಎಂದು ಗುರುತಿಸಲಾಗಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿರುವ ಐಶ್ವರ್ಯ ಕ್ರಷರ್ನಲ್ಲಿ ಈ ಘಟನೆ ನಡೆದಿದೆ.
ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
ವೆಂಕಟೇಶ್ ಎಂಬುವರಿಗೆ ಸೇರಿದ ಕ್ರಷರ್ನಲ್ಲಿ ಈ ಅವಘಡ ಸಂಭವಿಸಿದೆ. ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಯನ್ನು ಹೊಸಕೋಟೆಯ ಎಂವಿಜೆ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಮಾಸ್ತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.