ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಇಎನ್ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಶಿಕುಮಾರ್ ಬಂಧಿತ ಆರೋಪಿಯಾಗಿದ್ದು, ಕೆಜಿಎಪ್ ನ ಅಜ್ಜಪ್ಪನಹಳ್ಳಿ ಮುಖ್ಯ ರಸ್ತೆಯ ಮೋರಿಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದನು.
ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ!
ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಇಎನ್ ಪಿಐ ಲಕ್ಷ್ಮೀನಾರಾಯಣ & ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ 1,70,000 ಮೌಲ್ಯದ 2 ಕೆಜಿ 100 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.