ಮಾಲೂರು: ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕೊತ್ತೂರು ಗ್ರಾಮದಲ್ಲಿ ನಡೆದಿದೆ.
ಮಾಸ್ತಿ ಹೋಬಳಿ ದಿನ್ನೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತೂರು ರೈತ ನಾರಾಯಣಸ್ವಾಮಿ ಮೇಕೆಗಳನ್ನು ಗ್ರಾಮದ ಸಮೀಪದ ಗುಡ್ಡದ ಬಳಿ ಮೇಯಿಸುತ್ತಿದ್ದಾಗ ಕರಡಿಯೊಂದು ಏಕಾಏಕಿ ದಾಳಿ ನಡೆಸಿದೆ.
Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!
ಅವರ ಮುಖ ಹಾಗೂ ಕೈಯನ್ನು ಕಚ್ಚಿ ಗಂಭೀರ ಗಾಯಗಾಯಗೊಳಿಸಿದೆ. ಗಾಯಾಳುನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅರಣ್ಯ ಇಲಾಖೆ ಕರಡಿ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.