ಕೋಲಾರ: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿರೋಧಿಸಿ ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಮುಸ್ಲಿಮರಿಗೆ ಗುತ್ತಿಗೆ ಕಾಮಗಾರಿಯಲ್ಲಿ 4% ಮೀಸಲಾತಿ ನೀಡಲು ರಾಜ್ಯ ಸರ್ಕಾರದ ತೀರ್ಮಾನಕ್ಕೆ ಖಂಡನೆ ವ್ಯಕ್ತವಾಗಿದ್ದು,
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ರಾಜ್ಯ ಸರ್ಕಾರದ ಅಸಂವಿಧಾನಿಕ ನಡೆ ಖಂಡಿಸಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ಹಾಗೂ ಮಾಜಿ ಸಂಸದ ಮುನಿಸ್ವಾಮಿ, ಮಾಜಿ ಶಾಸಕರು ಸೇರಿದಂತೆ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.