ಯಾದಗಿರಿ:- KSRTC ಬಸ್- ಬೊಲೆರೋ ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ಚಾಲಕ ಶರಣಪ್ಪ (30), ಸುನೀತಾ (19), ಸೋಮವ್ವ (50) ಮತ್ತು ತಂಗಮ್ಮ ಮೃತರು. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ಬೊಲೆರೋ ವಾಹನದಲ್ಲಿ ಕುಟುಂಬಸ್ಥರು ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬೊಲೆರೋ ವಾಹನದಲ್ಲಿ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.