ಇಸ್ಲಾಮಾಬಾದ್:- ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಒಂದೆಡೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಸೆ ಬುಧವಾರ ರಾತ್ರಿ ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ.
ರಾತ್ರಿ 9 ಗಂಟೆ 58 ನಿಮಿಷಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ Scale) 4.4 ತೀವ್ರತೆ ದಾಖಲಾಗಿದೆ. ಕಂಪನದ ಅನುಭವ ಆಗುತ್ತಿದ್ದಂತೆ ಜನ ಭಯಗೊಂಡು ಹೊರಗಡೆ ಓಡಿ ಬಂದಿದ್ದಾರೆ.