ಬೆಂಗಳೂರು: ಬೆಂಗಳೂರಿನಲ್ಲಿ ತೀವ್ರ ಗಾಯಗಳೊಂದಿಗೆ ವಕೀಲ ಜಗದೀಶ್ ಎನ್ನುವವರ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಸಂಬಂಧ ಗಲಾಟೆ ಏನಾದರೂ ಆಗಿತ್ತಾ? ಅಥವಾ ಉದ್ದೇಶಪೂರ್ವಕವಾಗಿ ಹತ್ಯೆಗೈಯ್ಯಲಾಗಿದೆಯಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದೆ.
ಹೌದು ವಕೀಲ ಜಗದೀಶ್ ಅವರ ದೇಹ ರಕ್ತಸಿಕ್ತವಾಗಿ ನೈಸ್ ರಸ್ತೆಯಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಘಟನೆ ಸಂಬಂಧ ಮೃತ ಜಗದೀಶ್ ಸೋದರ ಸಂಬಂಧಿಯೊಬ್ಬರು ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಸಾವಿಗೆ ರಹಸ್ಯವನ್ನು ಬಯಲಿಗೆಳೆದಿದ್ದಾರೆ ಪ್ರಾಥಮಿಕ ತನಿಖೆ ಮಾಹಿತಿ ಪ್ರಕಾರ, ವಕೀಲ ಜಗದೀಶ್ ಸಾವಿಗೆ ರೋಡ್ ರೇಜ್ ಕಾರಣವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೇಲ್ನೋಟಕ್ಕೆ ಜಗದೀಶ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಕೀಲ್ ಜಗದೀಶ್ ನೈಸ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಅವರ ಕಾರಿಗೆ ಲಾರಿಯೊಂದು ಟಚ್ ಆಗಿದೆ. ಟಚ್ ಆಗುತ್ತಿದ್ದಂತೆ ಚಾಲಕ ಸ್ವಲ್ಪ ಮುಂದೆ ಹೋಗಿ ಲಾರಿ ನಿಲ್ಲಿಸಿದ್ದ. ಆಗ ಜಗದೀಶ್ ಕಾರು ನಿಲ್ಲಿಸಿ ಲಾರಿ ಚಾಲಕನ ಬಳಿಗೆ ಹೋಗಿದ್ದಾರೆ. ಈ ವೇಳೆ ಅವರಿಬ್ಬರ ಮಧ್ಯೆ ವಾಗ್ವಾದ ನಡೆದಿದೆ. ವಾಗ್ವಾದದ ಭರದಲ್ಲಿ ಜಗದೀಶ್ ಅರಿವಿಲ್ಲದೇ ನಡುರಸ್ತೆಗೆ ಹೋಗಿದ್ದಾರೆ. ಇದೇ ಸಮಯದಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯ ಹಿಂಬದಿಯ ಭಾಗ ಜಗದೀಶ್‌ಗೆ ಟಚ್ ಆಗಿದೆ. ಇದರಿಂದ ತಕ್ಷಣ ಕೆಳಗೆ ಬಿದ್ದು, ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.
ಲಾರಿ ಚಾಲಕನಿಗೆ ಹಿಂಬದಿಗೆ ಏನೋ ತಾಗಿದೆ ಎಂದು ಅನಿಸಿದಾಗ, ಸುಮಾರು ಅರ್ಧ ಕಿ.ಮೀ ಮುಂದೆ ಹೋಗಿ ಲಾರಿ ನಿಲ್ಲಿಸಿದ್ದ. ಆದರೆ ಯಾರು ಲಾರಿಯ ಹಿಂದೆ ಬರದ ಕಾರಣ ಏನು ಆಗಿಲ್ಲ ಎಂದು ಹಾಗೆಯೇ ತೆರಳುತ್ತಾನೆ ಎಂದು ತನಿಖೆ ವೇಳೆ ಮಾಹಿತಿ ಲಭ್ಯವಾಗಿದೆ.
ಸದ್ಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕೆಂಗೇರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು, ತನಿಖೆ ಮುಂದುವರಿಸಿದ್ದಾರೆ. ಇನ್ನೂ ಮೃತ ಜಗದೀಶ್ ಅವರ ಮರಣೋತ್ತರ ಪರೀಕ್ಷೆಯ ವರದಿ ಬರಬೇಕಿದೆ.