ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ವಿಧೇಯಕದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯಪಾಲರು ಸಹಿ ಹಾಕಿದರೆ ಅದು ಕಾಂಗ್ರೆಸ್ ಪರ ಎನ್ನುತ್ತಾರೆ. ಸಹಿ ಹಾಕದೇ ಇದ್ದರೆ ಅದು ಬಿಜೆಪಿ ಕಚೇರಿ ಎಂದು ಟೀಕಿಸುತ್ತಾರೆ ಎಂದರು.
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
ಕೆಎಎಸ್ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದೆ. ಅಧಿವೇಶನದಲ್ಲಿ ನಾನು ಈ ವಿಷಯ ಪ್ರಸ್ತಾಪಿಸಿದಾಗ ತೀರ್ಪು ಬಂದ ಮೇಲೆ ಮರುಪರೀಕ್ಷೆ ಬಗ್ಗೆ ಮುಕ್ತ ಮನಸ್ಸಿನಿಂದ ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದರು. ಈಗ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಗಮನಿಸಿ ಮುಂದೆ ಅಗತ್ಯ ಬಿದ್ದರೆ ಮುಂದೆಯೂ ಹೋರಾಟ ಮಾಡಲಾಗುವುದು ಎಂದು ಹೇಳಿದರು.