ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆರ್ಸಿಬಿಯ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ಕೊಂಡಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ: ಜಗದೀಶ್ ಶೆಟ್ಟರ್!
ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಈ ಸೀಸನ್ನಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಅನ್ನು ತನ್ನದಾಗಿಸಿಕೊಂಡರೆ ಈ ಸೀಸನ್ನಲ್ಲಿ ಇದುವರೆಗೆ ಅತಿ ಹೆಚ್ಚು ವಿಕೆಟ್ಗಳನ್ನು ಪಡೆಯುವ ಮೂಲಕ ವೇಗದ ಬೌಲರ್ ಜೋಶ್ ಹೇಜಲ್ವುಡ್ ಪರ್ಪಲ್ ಕ್ಯಾಪ್ ತನ್ನದಾಗಿಸಿಕೊಂಡರು.
ಒಂದೇ ಪಂದ್ಯದಲ್ಲಿ ಮೂರು ಮೂರು ಸಾಧನೆ ಮಾಡಿರುವ ಆರ್ಸಿಬಿ ತಂಡಕ್ಕೆ ಇದೀಗ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಶುಭ ಹಾರೈಸಿದಲ್ಲದೆ, ಎಲ್ಲಾ ಆಟಗಾರರನ್ನು ಅಭಿನಂದಿಸಿದ್ದಾರೆ. ಡೆಲ್ಲಿ ವಿರುದ್ಧ 6 ವಿಕೆಟ್ಗಳಿಂದ ಗೆದ್ದ ಆರ್ಸಿಬಿ ತಂಡವನ್ನು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಜಯ್ ಮಲ್ಯ 36 ಪದಗಳಲ್ಲಿ ಹಾಡಿ ಹೊಗಳಿದ್ದಾರೆ
ತಮ್ಮ ಎಕ್ಸ್ ಖಾತೆಯಲ್ಲಿ ಆರ್ಸಿಬಿ ಆಟಗಾರರ ಪ್ರದರ್ಶನದ ಬಗ್ಗೆ ಬರೆದುಕೊಂಡಿರುವ ಮಲ್ಯ, ‘ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಅದ್ಭುತ ಗೆಲುವಿಗಾಗಿ ಆರ್ಸಿಬಿಗೆ ಅಭಿನಂದನೆಗಳು. ತವರಿನಿಂದ ಹೊರಗೆ ಆಡಿರುವ ಆರಕ್ಕೆ 6 ಪಂದ್ಯಗಳಲ್ಲಿ ಗೆಲುವು.. ಐಪಿಎಲ್ನಲ್ಲಿ ಒಂದು ದಾಖಲೆ ನಿರ್ಮಾಣವಾಗಲಿದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಎರಡೂ ತಂಡಕ್ಕೆ ಬೋನಸ್. ಇಲ್ಲಿಯವರೆಗಿನ ಸಾಧನೆಗಳು ಅದ್ಭುತವಾಗಿವೆ. ಇದೇ ಧೈರ್ಯದಿಂದ ಮುಂದೆಯೂ ಆಟವಾಡುತ್ತಲೇ ಇರಿ ಎಂದಿದ್ದಾರೆ