Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕರಾವಳಿ ಭಾಗವನ್ನು ಅಭಿವೃದ್ಧಿ ಮಾಡಿ ಮತ್ತೆ ಇತಿಹಾಸ ಸೃಷ್ಟಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್

    By Author AINMay 10, 2025
    Share
    Facebook Twitter LinkedIn Pinterest Email
    Demo

    ಮಂಗಳೂರು: “ಕರಾವಳಿ ಭಾಗದ ಜನ ಪ್ರತಿಭಾವಂತರು, ಬುದ್ಧಿವಂತರು. ಇವರು ಇಲ್ಲೇ ಉದ್ಯೋಗ ಮಾಡುವ ವಾತಾವರಣ ನಿರ್ಮಿಸಬೇಕು. ಇಲ್ಲಿ ಮತ್ತೆ ಶಾಂತಿ ನೆಲೆಸಬೇಕು. ಜನರಲ್ಲಿ ಸಹೋದರತ್ವ ಭಾವನೆ ಮೂಡಿಸಬೇಕು. ಅಭಿವೃದ್ಧಿ ಕೆಲಸಗಳ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಇತಿಹಾಸ ಸೃಷ್ಟಿಸೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಗಳೂರಿನ ಬಂಗ್ರ ಕೂಳೂರುನಲ್ಲಿ ಶನಿವಾರ ನಡೆದ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ 2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.

    “ಇಪ್ಪತ್ತೈದು ವರ್ಷದ ಹಿಂದೆ ಎಸ್ ಎಂ.ಕೃಷ್ಣ ಅವರ ಸಂಪುಟದಲ್ಲಿ ಸಹಕಾರ ಮಂತ್ರಿಯಾಗಿದ್ದ ವೇಳೆ ಈ ಕಾರ್ಯಕ್ರಮದ ಜ್ಯೋತಿ ಬೆಳಗಿಸಿದ್ದೆ. ಅಂದು ಹಚ್ಚಿದ ಹಣತೆ ಲಕ್ಷಾಂತರ ಮಹಿಳೆಯರ ಬಾಳಿನಲ್ಲಿ ಬೆಳಕು ತಂದಿದೆ, ಇನ್ನೂ ಉರಿಯುತ್ತಲೇ ಇದೆ. ʼಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನಸಂಪದಂ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ’ ಎಂಬಂತೆ ಎಲ್ಲರಿಗೂ ಮಂಗಳವಾಗಲಿ, ಶುಭವಾಗಲಿ, ಆರೋಗ್ಯವಂತರಾಗಲಿ, ಐಶ್ವರ್ಯವಂತರಾಗಲಿ, ನೆಮ್ಮದಿಯಿಂದ ಬದುಕಲಿ ಎಂದು ಈ ಜ್ಯೋತಿಯನ್ನು ಮತ್ತೆ ನಾವೆಲ್ಲ ಬೆಳಗಿದ್ದೇವೆ” ಎಂದು ಹೇಳಿದರು.

    “ಹೆಣ್ಣು ಕುಟುಂಬದ ಕಣ್ಣು. ಅವರಿಗೆ ಆರ್ಥಿಕ ಶಕ್ತಿ ನೀಡಬೇಕು ಎಂದು ಕೃಷ್ಣ ಅವರ ಸರ್ಕಾರದಲ್ಲಿ ಸ್ತ್ರೀ ಶಕ್ತಿ ಕಾರ್ಯಕ್ರಮ ರೂಪಿಸಿದ್ದೆವು. ರಾಜೇಂದ್ರ ಕುಮಾರ್‌ ಅವರು ಯಾವುದೇ ರಾಜಕೀಯ ಸ್ಥಾನಮಾನದ ನಿರೀಕ್ಷೆ ಇಲ್ಲದೆ ಕರಾವಳಿ ಕ್ಷೇತ್ರದಲ್ಲಿ ಸಹಕಾರಿ ಧುರೀಣರಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಜನರ- ತಾಯಂದಿರ ಸೇವೆ ಮಾಡಬೇಕು. ಎಲ್ಲರಿಗೂ ಆರ್ಥಿಕವಾಗಿ ಶಕ್ತಿ ಕೊಡಬೇಕೆಂದು ನವೋದಯ ಚಾರಿಟೇಬಲ್‌ ಟ್ರಸ್ಟ್‌ ಸ್ಥಾಪಿಸಿದರು” ಎಂದರು.

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    “ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ. ಪದುಮನಾಭನ ಪಾದ ಭಜನೆ ಪರಮಸುಖವಯ್ಯ ಎಂಬ ಪುರಂದರ ದಾಸರ ಪದಗಳಂತೆ, ಇಷ್ಟು ಜನಸಾಗರದ ತಾಯಂದಿರ ಆಶೀರ್ವಾದ ಪಡೆಯಲು ಈ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ಬಂಗಾರದ ಬೆಲೆ ಕೊಳ್ಳುವವನಿಗೆ ಹಾಗೂ ಮಾರುವವನಿಗೆ ಮಾತ್ರ ಗೊತ್ತು. ಅದೇರೀತಿ ಯಾವ ಕುಟುಂಬ ಬದುಕುತ್ತದೆ, ಯಾವ ಸಂಸಾರ ಬದುಕುತ್ತದೆ, ಇಡೀ ಜೀವನ ಶಾಶ್ವತವಾಗಿ ಉಳಿಯುತ್ತದೆ ಅವರಿಗೆ ಮಾತ್ರ ಹೆಣ್ಣುಮಕ್ಕಳ ಬೆಲೆ ಗೊತ್ತು. ಹೆಣ್ಣುಮಕ್ಕಳ ತ್ಯಾಗ ಅರಿಯಬೇಕು. ಆ ಕುಟುಂಬದ ಶಕ್ತಿಯಾಗಬೇಕು” ಎಂದು ಬಣ್ಣಿಸಿದರು.

    “ಲಕ್ಷಾಂತರ ತಾಯಂದಿರು ತಮ್ಮ ಕುಟುಂಬಗಳನ್ನು ಬೆಳೆಸಿ, ದೇಶದ ಆಸ್ತಿಯಾಗಿ ಉಳಿದುಕೊಂಡಿದ್ದಾರೆ. ಇದೇ ನಾರಿ ಶಕ್ತಿ. ನಮ್ಮಲ್ಲಿ ಆಹ್ವಾನ ಪತ್ರಿಕೆ ನೀಡುವಾಗ ಶ್ರೀಮತಿ- ಶ್ರೀ ಎಂದು ಬರೆದಿದ್ದರು. ಶಿವನನ್ನು ಪಾರ್ವತಿ ಪರಮೇಶ್ವರ, ಶ್ರೀನಿವಾಸನನ್ನು ಲಕ್ಷ್ಮೀ- ವೆಂಕಟೇಶ್ವರ ಎನ್ನುತ್ತೇವೆ. ಗಣೇಶನ ಹಬ್ಬಕ್ಕೂ ಮುಂಚೆ ಗೌರಿ ಹಬ್ಬ ಮಾಡುತ್ತೇವೆ, ಭೂಮಿಗೆ ಮಾತೃಭೂಮಿ ಎನ್ನುತ್ತೇವೆ; ಭಾಷೆಗೆ ಮಾತೃಭಾಷೆ ಎನ್ನುತ್ತೇವೆ. ಹೀಗೆ ಮಹಿಳೆಯರಿಗೆ ಆದ್ಯತೆ ನೀಡುವುದು ನಮ್ಮ ಸಂಸ್ಕೃತಿ” ಎಂದರು.

    “ನಾನು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡು ನನ್ನ ರಾಜಕೀಯ ಜೀವನ ಆರಂಭಿಸಿದ್ದೆ. ನಂತರ ನಾನು ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕನಾಗಿ, ಸಹಕಾರಿ ಸಚಿವನಾಗಿ ಈಗ ಉಪಮುಖ್ಯಮಂತ್ರಿಯಾಗಿ ಜನರ ಮುಂದೆ ನಿಂತಿದ್ದೇನೆ” ಎಂದು ಹೇಳಿದರು.

    “ಪ್ರಯತ್ನಗಳು ವಿಫಲ ಆಗಬಹುದು, ಆದರೆ ಪ್ರಾರ್ಥನೆ ವಿಫಲವಾಗಲ್ಲ. ಪ್ರಾರ್ಥನೆ ಸಲ್ಲಿಸಲು ಎಂದೇ‌ ಕರಾವಳಿ ಪ್ರದೇಶಕ್ಕೆ ಬರುತ್ತೇವ ಸಂತೋಷ ಆಗುತ್ತದೆ. ಈ ಭಾಗದ ಕಟೀಲು, ಧರ್ಮಸ್ಥಳ, ಸುಬ್ರಹ್ಮಣ್ಯದಂಥ ಶಕ್ತಿ ತಾಣವಾಗಿದೆ. ಈ ಪ್ರದೇಶ ಯಾವುದರಲ್ಲೂ ಕಮ್ಮಿ ಇಲ್ಲ, ಶಿಕ್ಷಣ, ಧಾರ್ಮಿಕತೆ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಇಲ್ಲಿ ಪ್ರಗತಿ ಸಾಧಿಸಲಾಗಿದೆ” ಎಂದರು.

    “ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿ ಮಾಡುತ್ತಿದ್ದಾರೆ, ಅದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಇಲ್ಲಿ ಕೊಟ್ಟ ಮಾತುಗಳನ್ನ ನಾವೂ ಉಳಿಸಿಕೊಂಡು ಬರುತ್ತಿದ್ದೇವೆ. ಈ ಜಿಲ್ಲೆ ಬಗ್ಗೆ ಅಪಾರ ವಿಶ್ವಾಸ, ನಂಬಿಕೆ ಇಟ್ಟುಕೊಂಡಿದ್ದೇನೆ. ಇಲ್ಲಿನ ಜನ ಹೆಚ್ಚು ಬುದ್ಧಿವಂತರು, ವಿದ್ಯಾವಂತರು. ಅತಿಹೆಚ್ಚು ವಿದ್ಯಾವಂತರನ್ನು ಕೊಟ್ಟ ಜಿಲ್ಲೆ ಇದು. ದೇಶದಲ್ಲಿ ಅತಿ ಹೆಚ್ಚು ಬ್ಯಾಂಕುಗಳನ್ನು ಕೊಟ್ಟ ಪುಣ್ಯಭೂಮಿ ಇದು. ಈ ಪರಂಪರೆಯನ್ನು ನೀವು ಉಳಿಸಿಕೊಳ್ಳಬೇಕು” ಎಂದು ತಿಳಿಸಿದರು.

    “ಈ ಭಾಗದ ಪ್ರತಿಭಾವಂತರು ಉದ್ಯೋಗಕ್ಕಾಗಿ ಹೊರದೇಶಕ್ಕೆ ಹೋಗುತ್ತಿದ್ದಾರೆ. ವಿದ್ಯಾವಂತ ಯುವಕರು ನಾಡಿನ ಶಕ್ತಿ. ಅವರು ವಿದ್ಯೆ ಪಡೆದು, ಇಲ್ಲೇ ಉದ್ಯೋಗ ಮಾಡುವಂತಾಗಲು ನನ್ನೆಲ್ಲ ಶಾಸಕ ಮಿತ್ರರು ಶ್ರಮಿಸಬೇಕು ಎಂದು ತಿಳಿಸಿದ್ದೇನೆ” ಎಂದರು.

    “ಈ ಭೂಮಿಯಲ್ಲಿ ಶಾಂತಿ ನೆಲೆಸ ಬೇಕು. ಎಲ್ಲಾ ಧರ್ಮದವರು ಸಹೋದರ ಭಾವನೆಯಲ್ಲಿ ಬದುಕಬೇಕು. ಧರ್ಮ ಯಾವುದಾದರೇನು ತತ್ವ ಒಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ; ದೇವನೊಬ್ಬ ನಾಮ ಹಲವು. ಅಮ್ಮನ ನೆನಪು ಪ್ರೀತಿಯ ಮೂಲ. ಗುರುವಿನ ನೆನಪು ಜ್ಞಾನದ ಮೂಲ. ಈ ದೇವರ ನೆನಪು ಭಕ್ತಿಯ ಮೂಲ. ಈ ಮೂರರ ನೆನಪು ಮನುಷ್ಯತ್ವಕ್ಕೆ ಮೂಲ. ಮನುಷ್ಯತ್ವ ಮೋಕ್ಷಕ್ಕೆ ಮೂಲ. ಎಲ್ಲರಲ್ಲೂ ಮನುಷ್ಯತ್ವ ಕಾಣಬೇಕು. ತಾಯಂದಿರಿಗೆ ಒಳ್ಳೇದಾಗಬೇಕು, ಆರ್ಥಿಕವಾಗಿ ಶಕ್ತಿ ಕೊಡಬೇಕು. ಹಾಗಿದ್ದಾಗ ಕುಟುಂಬಕ್ಕೆ ಆರ್ಥಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ಕೊಡುತ್ತಾರೆಂದು ರಾಜೇಂದ್ರಕುಮಾರ್‌ ಅವರೂ ನಂಬಿದ್ದಾರೆ” ಎಂದು ತಿಳಿಸಿದರು.

    “ಒಬ್ಬನಿಗೆ ಮೀನು ಕೊಟ್ಟರೆ ಒಂದು ಹೊತ್ತು ಊಟಕ್ಕೆ, ಅದೇ ಮೀನುಗಾರಿಕೆ ಕಲಿಸಿದರೆ ಅವನ ಜೀವನಕ್ಕೆ ನೆರವಾಗುತ್ತದೆ ಎಂದು ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್‌ ಯೂನಿಸ್‌ ಹೇಳಿದ್ದರು. ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಅವಕಾಶ ಸಿಕ್ಕಾಗ ಜನರ ಸೇವೆ ಮಾಡಬೇಕು” ಎಂದು ಸಲಹೆ ನೀಡಿದರು.

    “ನನಗೆ ಮಹಿಳೆಯರು ಮತ್ತು ಯುವಕರ ಮೇಲೆ ಹೆಚ್ಚಿನ ನಂಬಿಕೆ. ಇವರ ಮೇಲೆ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಈ ಭಾಗದಲ್ಲಿ ಮಹಿಳೆಯರು ಕುಟುಂಬಕ್ಕಾಗಿ ಪಡೆದ ಸಾಲವನ್ನು ಗೃಹಲಕ್ಷ್ಮಿಯಿಂದ ಹಣದಿಂದ ತೀರಿಸುತ್ತಿದ್ದಾರೆ. ಶಕ್ತಿಯಿಂದ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ, 2೦೦ ಯೂನಿಟ್‌ ವರೆಗೂ ಉಚಿತ ವಿದ್ಯುತ್‌, 10 ಕೆ.ಜಿ. ಅಕ್ಕಿ ಕೊಡುತ್ತಿದ್ದೇವೆ. ಕೊಟ್ಟ ಅವಕಾಶದಲ್ಲಿ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ ಬದ್ಧರಾಗಿದ್ದೇವೆ” ಎಂದು ತಿಳಿಸಿದರು.

    “ಬ್ಯಾಂಕ್‌ನಲ್ಲಿ ದುಡ್ಡಿದ್ದರೆ ಏನೂ ಪ್ರಯೋಜನ ಇಲ್ಲ. ದುಡ್ಡು- ಬ್ಲಡ್‌ ಎರಡೂ ಜಂಗಮ ಸ್ವರೂಪಿಯಾಗಿರಬೇಕು ಎಂದು ಸಾಯಿಬಾಬಾ ಅವರು ಹೇಳಿದ್ದರು. ಎರಡೂ ಒಂದೇ ಕಡೆ ಇದ್ದರೆ ಸಮಸ್ಯೆ ಹೆಚ್ಚು. ಹಣ ಹರಿದಾಡುತ್ತಿದ್ದರೆ ಆರ್ಥಿಕವಾಗಿ, ದೇಹದಲ್ಲಿ ರಕ್ತ ಚೆನ್ನಾಗಿ ಹರಿದಾಡುತ್ತಿದ್ದರೆ ಆರೋಗ್ಯವಾಗಿರುತ್ತೇವೆ. ಇದೇ ಸಹಕಾರಿ ತತ್ವದ ಮೂಲ. ನಾವೆಲ್ಲರೂ ಒಗ್ಗಟ್ಟಾಗಿ ಈ ಜಿಲ್ಲೆಯ ಪರಂಪರೆ, ಇತಿಹಾಸ ಉಳಿಸಿ, ಗೌರವ ಕಾಪಾಡೋಣ. ಈ ಕರಾವಳಿಯನ್ನು ಅಭಿವೃದ್ಧಿ ಮಾಡಿ ಇತಿಹಾಸದ ಪುಟಕ್ಕೆ ಸೇರಿಸೋಣ. ಈ ರಾಜ್ಯದ ಭವಿಷ್ಯಕ್ಕಾಗಿ ಕೆಲಸ ಮಾಡೋಣ” ಎಂದು ಕರೆಕೊಟ್ಟರು.

    “ರಾಜೇಂದ್ರಕುಮಾರ್‌ ಮತ್ತವರ ತಂಡ ಯಾವುದೇ ಅಧಿಕಾರ ಬಯಸದೆ ನಿಮ್ಮ ಸೇವೆ ಮಾಡುತ್ತಾ ಇತಿಹಾಸ ನಿರ್ಮಿಸಿದ್ದಾರೆ. ಜನನ ಉಚಿತ, ಮರಣ ಖಚಿತ. ಹುಟ್ಟು- ಸಾವುಗಳ ನಡುವೆ ಏನಾದರೂ ಮಾಡಬೇಕು ಎಂದು ಹೆಣ್ಣುಮಕ್ಕಳ ಬಾಳಿನಲ್ಲಿ ಜ್ಯೋತಿ ಬೆಳಗಿಸುವ ಕೆಲಸ ಇವರು ಮಾಡಿದ್ದಾರೆ. ಸರ್ಕಾರದ ಪರವಾಗಿ ಅವರಿಗೆ ತುಂಬು ಹೃದಯದಿಂದ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    MANDYA – ಸಿಎಂ ಸಿದ್ದರಾಮಯ್ಯ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

    July 1, 2025

    KODAGU – ಹಾರಂಗಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    July 1, 2025

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025

    ಸಂಘಟನಕಾರ, ಹೋರಾಟಗಾರನಿಗೆ ಕೊಡುವ ಅವಕಾಶ- ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

    July 1, 2025

    ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ;ತಾಯಿ-ಮಗ ದುರ್ಮರಣ

    July 1, 2025

    ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ; ಕೊನೆಗೂ ಗಡಿ ಉಸ್ತುವಾರಿ ಸಚಿವರ ನೇಮಿಸಿದ ಸರ್ಕಾರ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.