ಬೆಂಗಳೂರು:- ಲೋನ್ ವಿಚಾರಕ್ಕೆ ಕಿರಿಕ್ ನಡೆದು EMI ಕಟ್ಟಲು ಹೇಳಿದ ಬ್ಯಾಂಕ್ ಸಿಬ್ಬಂದಿಗೆ ಕಲ್ಲೇಟು ಹೊಡೆದಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ಜರುಗಿದೆ.
ನಿಮ್ಮ ಮನೆಯಲ್ಲೂ AC ಇದ್ಯಾ!? ಅದ್ರಲ್ಲಿರೋ ‘ಟನ್’ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿ ತಿಳಿಯಿರಿ!
ಕಲ್ಲೇಟು ತಿಂದ ಬ್ಯಾಂಕ್ ಸಿಬ್ಬಂದಿಯನ್ನು ಚಂದನ್ ಎಂದು ಗುರುತಿಸಲಾಗಿದೆ. ರಮೇಶ್ ಎಂಬಾತ ಕಳೆದ ಎರಡು ತಿಂಗಳಿನಿಂದ ಇಎಂಐ ಕಟ್ಟಿರಲಿಲ್ಲ. ಫೋನ್ ಮಾಡಿದರೆ ರಿಸೀವ್ ಮಾಡುತ್ತಿರಲಿಲ್ಲ. ಕೊನೆಗೆ ಫೋನ್ ರಿಸಿವ್ ಮಾಡಿದ ರಮೇಶ್ ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಬರುವಂತೆ ಸಿಬ್ಬಂದಿಗೆ ಹೇಳಿದ್ದ. ಬ್ಯಾಂಕ್ ಸಿಬ್ಬಂದಿ ಸ್ಥಳಕ್ಕೆ ಹೋದ ವೇಳೆ ಲೋನ್ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಮೇಶ್ ಏಕಾಏಕಿ ಅಲ್ಲೇ ಇದ್ದ ಕಲ್ಲಿನಿಂದ ಬ್ಯಾಂಕ್ ಸಿಬ್ಬಂದಿ ಚಂದನ್ ಮೇಲೆ ಕಲ್ಲೂ ತೂರಿ ಎಸ್ಕೇಪ್ ಆಗಿದ್ದಾನೆ.
ಘಟನೆಯಿಂದ ಬ್ಯಾಂಕ್ ಸಿಬ್ಬಂದಿ ಚಂದನ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.