ಕೋಲಾರ : ಕೋಲಾರ ಜಿಲ್ಲೆಯ ಹಲವೆಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೋಲಾರದ ಸರ್ವೆ ಸೂಪರ್ವೈಸರ್ ಸುರೇಶ್ ಬಾಬು ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸರ್ವೆ ಇಲಾಖೆ ಅಧಿಕಾರಿ ಸುರೇಶ್ ಬಾಬು ಸೇರಿದಂತೆ ಒಟ್ಟು 6 ಕಡೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಕೋಲಾರ ನಗರದ ಮನೆ, ಮಾಲೂರು ಪಟ್ಟಣದ ಮನೆ. ನಿಡಘಟ್ಟ ಗ್ರಾಮದ ಮನೆ ಕಚೇರಿಗಳು ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ. ಅಕ್ರಮವಾಗಿ ಸರ್ಕಾರಿ ದಾಖಲೆ ತಿದ್ದಿ ಸರ್ಕಾರಿ ಭೂಮಿ ಕಬಳಿಕೆ ಮಾಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಆಸ್ತಿಗಳಿಗೆ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸದ್ಯ ಲೋಕಾಯುಕ್ತ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.