ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪೀಣ್ಯದ ಫ್ಲೈಓವರ್ ಮೇಲೆ ಲಾರಿಯೊಂದು ಏಕಾಏಕಿ ಹೊತ್ತಿ ಉರಿದ ಘಟನೆ ನಡೆದಿದೆ. ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕೂಡಲೇ ಲಾರಿಯಿಂದ ಕೆಳಗಿಳಿದಿದ್ದಾರೆ. ಬೆಂಕಿ ಹೊತ್ತಿಕೊಂಡ ಹಿನ್ನೆಲೆ ನಗರದ ಕಡೆಗೆ ತಾತ್ಕಾಲಿಕವಾಗಿ ಪೀಣ್ಯ ಫ್ಲೈಓವರ್ ಬಂದ್ ಮಾಡಲಾಗಿದೆ.
ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದಿಕ್ಕಿನಲ್ಲಿ ಪೊರಕೆಯನ್ನು ಇಡಬಾರದು..! ಏನಾಗುತ್ತೆ ಗೊತ್ತಾ..?
ನಗರದ ಕಡೆಗೆ ಬರುವವರು ಫ್ಲೈಓವರ್ ಕೆಳಗಡೆ ಬರುವಂತೆ ಸೂಚನೆ ನೀಡಲಾಗಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.