ಹುಬ್ಬಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಸಂಘ ಮುಷ್ಕರಕ್ಕೆ ಮುಂದಾಗಿದೆ. ಏಫ್ರಿಲ್ 14ರಿಂದ ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದ್ದು, ಹುಬ್ಬಳ್ಳಿಯಲ್ಲಿ ಲಾರಿ ಮಾಲೀಕರಿಂದ ಮಾಹಿತಿ ನೀಡಿದ್ದಾರೆ.
ಕಳೆದ ಆರು ತಿಂಗಳಲ್ಲಿ ಐದು ಬಾರಿ ಡೀಸೆಲ್ ಬೆಲೆ ಏರಿಕೆ ಮಾಡಿರುವ ಸರ್ಕಾರದ ನಿರ್ಧಾರ ಖಂಡನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏ.14ರ ರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಎಂದು ಲಾರಿ ಮಾಲೀಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪಹೇಳಿದ್ದಾರೆ.
ಕನಕಪುರ, ನೆಲಮಂಗಲದಲ್ಲೂ ಬೇಡ, ಶಿರಾ ಬಳಿ ಏರ್ಪೋಟ್ ಮಾಡಿ: ಸಿಎಂಗೆ ಕೈ ಶಾಸಕರ ಪತ್ರ
ಇದೇ ವೇಳೆ ರಾಜ್ಯ ಸರ್ಕಾರ ಅಕ್ಷರಶಃ ಲೂಟಿಗೆ ಇಳಿದಿದೆ. ರಾಜ್ಯ ಹೆದ್ದಾರಿಗಳಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹಿಸುತ್ತಿದೆ. ಝಳಕಿ, ಅತ್ತಿಬೆಲೆ ಆರ್ಟಿಒ ಚೆಕ್ ಪೋಸ್ಟ್ಗಳು ಕೋಟ್ಯಂತರ ಹಣವನ್ನು ಸರ್ಕಾರದ ಪರವಾಗಿ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಲಾರಿಗಳ ಸಂಚಾರದಿಂದ ಶೇ 35ರಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ಲಾರಿ ಮಾಲೀಕರ ಮತ್ತು ಚಾಲಕರ ಹಿತ ಕಾಪಾಡಲು ಮುಂದೆ ಬರುತ್ತಿಲ್ಲ. ರಾಜ್ಯ ರಸ್ತೆಗಳಿಗೆ ಬಣ್ಣ ಬಳಿದು ಟೋಲ್ ಸಂಗ್ರಹವನ್ನು ಸ್ಥಳೀಯ ಪುಡಾರಿಗಳಿಗೆ ವಹಿಸಿದ್ದಾರೆ. 18 ರಸ್ತೆಗಳಿಗೆ ದರ ವಿಧಿಸಿದ್ದಾರೆ. ಕಮರ್ಶಿಯಲ್ ಟ್ಯಾಕ್ಸ್ ಚೆಕ್ ಪೋಸ್ಟ್ಗಳು 1028 ಕಡೆ ಇವೆ. ಗಡಿ ಠಾಣೆಗಳು ಲಾರಿ ಮಾಲೀಕರ ರಕ್ತ ಹೀರುತ್ತಿವೆ. ಈ ಅನ್ಯಾಯ, ದೌರ್ಜನ್ಯ ತಡೆಯಬೇಕಾದ ಸರ್ಕಾರ ಮತ್ತೆ ತೈಲ ಬೆಲೆ ಏರಿಸುವ ಮೂಲಕ ಬರೆ ಎಳೆದಿದೆ ಎಂದು ಕಿಡಿಕಾರಿದರು.