ಬೆಂಗಳೂರು:- ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಹೋರಾಟ ತೀವ್ರಗೊಳಿಸಲು ಲಾರಿ ಮಾಲೀಕರು ಮುಂದಾಗಿದ್ದಾರೆ. ಲಾರಿಗಳು ನಿಂತಲ್ಲೇ ನಿಂತಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಆಗುತ್ತಿದೆ. ಹೀಗಾಗಿ, ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಅಭಾವದ ಬಿಸಿ ತಟ್ಟಲು ಶುರುವಾಗಿದೆ. ಮಾರುಕಟ್ಟೆಗಳಲ್ಲಿ ಅಕ್ಕಿ, ಬೇಳೆ, ಎಣ್ಣೆ ಸೇರಿದಂತೆ ಅನೇಕ ವಸ್ತುಗಳು ದುಬಾರಿಯಾಗಿವೆ.
ಲಾರಿ ಬಂದ್ ಆಗಿದ್ದನ್ನೇ ಮುಂದಿಟ್ಟುಕೊಂಡು ಕಾಳಸಂತೆ ದಂಧೆಕೋರರು ಇವತ್ತಿನಿಂದ ಕೃತಕ ಅಭಾವ ಸೃಷ್ಟಿಸುವ ಸಾಧ್ಯತೆಯೂ ಇದೆ. ಹೀಗಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ಭೀತಿ ಕಾಡುತ್ತಿದೆ ಎಂದು ಬೆಂಗಳೂರಿನ ಕೆಲವು ಮಂದಿ ಅಂಗಡಿ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ