ಐಪಿಎಲ್ 2025 ರ ನಾಲ್ಕನೇ ಪಂದ್ಯದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿವೆ.
ನಿಮ್ಮ ಮೊಬೈಲ್ ನಲ್ಲಿ ಈ ಆ್ಯಪ್ ಇದ್ಯಾ!? ಹಾಗಿದ್ರೆ ಕೂಡಲೇ ಡಿಲೀಟ್ ಮಾಡಿ!
ತಮ್ಮ ತವರು ನೆಲವಾದ ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಮರಳುವ ಮೊದಲು, ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಮೊದಲ ಎರಡು ಪಂದ್ಯಗಳನ್ನು ವಿಶಾಖಪಟ್ಟಣಂನಲ್ಲಿ ಆಡುತ್ತಿದ್ದು, ಮೊದಲ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯ ವಿಶೇಷ ಏಕೆಂದರೆ ಲಕ್ನೋ ನಾಯಕ ರಿಷಭ್ ಪಂತ್ ಐಪಿಎಲ್ನಲ್ಲಿ ಮೊದಲ ಬಾರಿಗೆ ತಮ್ಮ ಹಳೆಯ ತಂಡ ದೆಹಲಿ ವಿರುದ್ಧ ಆಡಲಿದ್ದಾರೆ. ಅದೇ ಸಮಯದಲ್ಲಿ, ಸತತ ಮೂರು ಋತುಗಳಲ್ಲಿ ಲಕ್ನೋ ತಂಡದ ನಾಯಕರಾಗಿದ್ದ ಕೆ.ಎಲ್. ರಾಹುಲ್ ಈಗ ದೆಹಲಿ ತಂಡದ ಭಾಗವಾಗಿದ್ದಾರೆ.
ಅದರಂತೆ ಮೊದಲಿಗೆ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಲಕ್ನೋ ಮೊದಲು ಬ್ಯಾಟಿಂಗ್ ಮಾಡುತ್ತಿದೆ.
ಡೆಲ್ಲಿ ತಂಡ
ಜ್ಯಾಕ್ ಫ್ರೇಸರ್-ಮಗಾರ್ಕ್, ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮೋಹಿತ್ ಶರ್ಮಾ, ಮುಖೇಶ್ ಕುಮಾರ್.
ಲಕ್ನೋ ತಂಡ
ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ರಿಷಭ್ ಪಂತ್, ಡೇವಿಡ್ ಮಿಲ್ಲರ್, ಪ್ರಿನ್ಸ್ ಯಾದವ್, ದಿಗ್ವೇಶ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್ ಮತ್ತು ರವಿ ಬಿಷ್ಣೋಯ್.