ಮದ್ದೂರು:- ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಶೇಖರಿಸಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ನಿಯಮ ಉಲ್ಲಂಘನೆ: ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್ ಬಾರ್ಗಳ ಮೇಲೆ ಖಾಕಿ ದಾಳಿ!
ಮದ್ದೂರು ತಾಲೂಕಿನ ತೂಬಿನಕೆರೆ, ನಿಲುವಾಗಿಲು, ತೊರೆಶೆಟ್ಟಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದರ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸ್, ಕಂದಾಯ,ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.
ಈ ವೇಳೆ ಅಕ್ರಮವಾಗಿ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳು ಜಪ್ತಿ ಮಾಡಲಾಗಿದೆ. ಅಕ್ರಮವಾಗಿ ಮರಳು ಸಂಗ್ರಹಣೆ ಮಾಡ್ತಿದ್ದವರ ವಿರುದ್ದ ಕೆಸ್ತೂರು ಹಾಗೂ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.