ಚಾಮರಾಜನಗರ:-ಮಲೆ ಮಹದೇಶ್ವರ ಮತ್ತೆ ಕೋಟಿ ಒಡೆಯನಾಗಿದ್ದಾನೆ. ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲೂಕಿನಲ್ಲಿರುವ ಪವಿತ್ರ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ 34 ದಿನದಲ್ಲಿ 2 ಕೋಟಿ 65 ಲಕ್ಷಕ್ಕೂ ಹೆಚ್ಚು ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. 58 ಗ್ರಾಂ, ಬೆಳ್ಳಿ 02 ಕೆ.ಜಿ 070 ಗ್ರಾಂ ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಸಿಕ್ಕಿದೆ.
ಹುಡುಗಿ ವಿಚಾರಕ್ಕೆ ಕಿರಿಕ್: ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್! Video Viral
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7.00 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರ ದಿವ್ಯಸಾನಿದ್ಯದಲ್ಲಿ ಮಲೆಮಹದೇಶ್ವರಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡು 34 ದಿನಗಳಲ್ಲಿ ಒಟ್ಟು ಮೊತ್ತ ರೂ.2,65,04,712.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 58 ಗ್ರಾಂ, ಬೆಳ್ಳಿ 02 ಕೆ.ಜಿ 070 ಗ್ರಾಂ ಹುಂಡಿಯಲ್ಲಿ ದೊರೆತಿದೆ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು.ಸಿ, ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಲೆ ಲೆಕ್ಕಾದೀಕ್ಷಕರಾದ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಬಸವಣ್ಣ, ಶಿರಸ್ತೇದಾರ್ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.