ಇಂಡಿಯನ್ ಪ್ರೀಮಿಯರ್ ಲೀಗ್ನ 37ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 157 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್ಗಳ ಗೆಲುವು ದಾಖಲಿಸಿದೆ.
ಈ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ (Virat Kohli). ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕಿಂಗ್ ಕೊಹ್ಲಿ 54 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 74 ರನ್ ಬಾರಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ವಿರಾಟ್ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿಯಿತು.
ಎಚ್ಚರ ಜನರೇ: ಜ್ವರ, ತಲೆನೋವು ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ!? ಇದು ಎಷ್ಟು ಡೇಂಜರ್ ಗೊತ್ತಾ?
ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ಇದು ನಮಗೆ ಬಹಳ ಮುಖ್ಯವಾದ ಪಂದ್ಯವಾಗಿತ್ತು. ಏಕೆಂದರೆ ಪ್ಲೇಆಫ್ ಅರ್ಹತೆಯ ವಿಷಯದಲ್ಲಿ 2 ಅಂಕಗಳು ಭಾರಿ ವ್ಯತ್ಯಾಸವನ್ನುಂಟುಮಾಡಬಹುದು. ನಾವು ತವರಿನಲ್ಲಿ ಸೋತರೂ, ಹೊರಗಡೆ ಉತ್ತಮ ಕ್ರಿಕೆಟ್ ಆಡಿದ್ದೇವೆ. ನೀವು ಪಾಯಿಂಟ್ಸ್ ಟೇಬಲ್ನಲ್ಲಿ ಎಂಟರಿಂದ ಹತ್ತು ಅಂಕಗಳಿಗೆ ಹೋದಾಗ, ಅದು ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರಿ ವ್ಯತ್ಯಾಸವನ್ನುಂಟು ಮಾಡುತ್ತದೆ.
ಪ್ರತಿ ಪಂದ್ಯದಲ್ಲೂ 2 ಅಂಕಗಳನ್ನು ಪಡೆಯುವುದು ನಮ್ಮ ಮನಸ್ಥಿತಿಯಾಗಿರಬೇಕು. ನಾನು ನನ್ನ ಬ್ಯಾಟಿಂಗ್ನಲ್ಲಿ ಇನ್ನಷ್ಟು ವೇಗವನ್ನು ಹೆಚ್ಚಿಸಲು ಬಯಸಿದ್ದೆ. ಆದರೆ ಈ ಹಂತದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಬಿರುಸಿನ ಬ್ಯಾಟಿಂಗ್ನೊಂದಿಗೆ ರನ್ ಗತಿಯಲ್ಲಿ ತುಂಬಾ ವ್ಯತ್ಯಾಸವನ್ನು ಉಂಟು ಮಾಡಿದ್ದರು.
ಹೀಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯು ದೇವದತ್ ಪಡಿಕ್ಕಲ್ಗೆ ಕೊಡಬೇಕಿತ್ತು ಎಂಬುದು ನನ್ನ ಭಾವನೆ. ಇದಾಗ್ಯೂ ಈ ಪ್ರಶಸ್ತಿ ನನಗೆ ಕೊಟ್ಟಿದ್ದಾರೆ ಎಂದು ನನಗೆ ತಿಳೀತಿಲ್ಲ. ಈ ಪ್ರಶಸ್ತಿಗೆ ದೇವ್ (ದೇವದತ್ ಪಡಿಕ್ಕಲ್) ಅರ್ಹರಾಗಿದ್ದರು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.