Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇಂದಿನಿಂದ 10 ದಿನಗಳು ಮಂಗಳೂರು – ಬೆಂಗಳೂರು ರೈಲು ಸಂಚಾರ ರದ್ದು – ಕಾರಣ ಇಲ್ಲಿದೆ!

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ಮಂಗಳೂರು:- ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ.

    ಈ ಸಂಬಂಧ ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. ಡಿಸೆಂಬರ್ 14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8 ರವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರಸಂಪರ್ಕ ಬ್ಲಾಕ್ ಕೆಲಸಗಳು ಆಗುತ್ತವೆ.

    ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು ಮಾರ್ಗಗಳು ಲಭ್ಯವಿರುವುದಿಲ್ಲ.

    ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ, ಎಂಜಿನಿಯರಿಂಗ್ ಕೆಲಸಕ್ಕಾಗಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಟ್ರಾಫಿಕ್ ಬ್ಲಾಕ್ ಅನ್ನು ಮಾಡಲಾಗುವುದು ಮತ್ತು ಈ ಅವಧಿಯಲ್ಲಿ ಯಾವುದೇ ರೈಲುಗಳು ಕಾರ್ಯನಿರ್ವಹಿಸುವುದಿಲ್ಲ.

    ಈ ಅವಧಿಯಲ್ಲಿ ಹಾಸನ ಜಂಕ್ಷನ್ ಯಾರ್ಡ್ ನಲ್ಲಿ ಸಿಗ್ನಲಿಂಗ್, ಇಂಟರ್ಲಾಕ್ ಮತ್ತು ಇತರ ಇಂಜಿನಿಯರಿಂಗ್ ವ್ಯವಸ್ಥೆ ಮರುವಿನ್ಯಾಸಗೊಳಿಸುವ ಕೆಲಸ ನಡೆಯಲಿದೆ. ಈ ಕಾರಣದಿಂದ ರೈಲು ಸಂಚಾರ ರದ್ದುಪಡಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.

    ರದ್ದುಗೊಂಡ ರೈಲುಗಳ ವಿವರ ಹೀಗಿದೆ

    1. ಬೆಂಗಳೂರು-ಕಣ್ಣೂರು-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ (ಪ್ರತಿ ರಾತ್ರಿ ಸಂಚರಿಸುವ ರೈಲು) – ಡಿಸೆಂಬರ್ 16 ರಿಂದ ಡಿಸೆಂಬರ್ 20 ರವರೆಗೆ ರದ್ದು.

    2. ಬೆಂಗಳೂರು-ಕಾರವಾರ-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ (ಪ್ರತಿ ರಾತ್ರಿ ಸಂಚರಿಸುವ ರೈಲು) – ಡಿಸೆಂಬರ್ 16 ರಿಂದ ಡಿಸೆಂಬರ್ 20 ರವರೆಗೆ ರದ್ದು.

    3. ಯಶವಂತಪುರ-ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್‌ಪ್ರೆಸ್ – ಡಿಸೆಂಬರ್ 14, 17, 19 ಮತ್ತು 21 ರಂದು ರದ್ದು.

    4. ಯಶವಂತಪುರ-ಕಾರವಾರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್‌ಪ್ರೆಸ್ – ಡಿಸೆಂಬರ್ 13, 15, 18, 20 ಮತ್ತು 22 ರಂದು ರದ್ದು.

    5. ಯಶವಂತಪುರ-ಮಂಗಳೂರು ಜಂಕ್ಷನ್ ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) – ಡಿಸೆಂಬರ್ 16 ರಂದು ರದ್ದು.

    6. ಮಂಗಳೂರು ಜಂಕ್ಷನ್-ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) – ಡಿಸೆಂಬರ್ 17 ರಂದು ರದ್ದು.

    Demo
    Share. Facebook Twitter LinkedIn Email WhatsApp

    Related Posts

    ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ!

    June 30, 2025

    ಹಾಸನದಲ್ಲಿ ಮುಂದುವರಿದ ಸರಣಿ ಹೃದಯಾಘಾತ: ಆಟೋ ಓಡಿಸುತ್ತಲೇ ಪ್ರಾಣ ಬಿಟ್ಟ ಡ್ರೈವರ್!

    June 30, 2025

    ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ವಿಶೇಷ ಸಮಿತಿ ರಚನೆ!

    June 30, 2025

    ಲಂಚ ಸ್ವೀಕರಿಸುವಾಗ ‘ಲೋಕಾ’ ಬಲೆಗೆ ಬಿದ್ದ ಕಂದಾಯ ಅಧಿಕಾರಿ!

    June 30, 2025

    ಮಹಿಳೆ ಹತ್ಯೆ: ಗಂಡ, ಅತ್ತೆ ವಿರುದ್ಧ ದಾಖಲಾಯ್ತು ದೂರು.. ತನಿಖೆ ಚುರುಕು!

    June 30, 2025

    5 ಹುಲಿಗಳ ಸರಣಿ ಸಾವಿಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿ ಕಾರಣ: ಸಂಸದ ಸುನೀಲ್ ಬೋಸ್

    June 30, 2025

    ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ್ದ ಪೊಲೀಸರು ಸಸ್ಪೆಂಡ್!

    June 30, 2025

    ಆರ್ಎಲ್ ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ : ಸತತ 4ನೇ ವರ್ಷವೂ ಅಗ್ರಸ್ಥಾನ ಪಡೆದ ವಿದ್ಯಾಸಂಸ್ಥೆ..!

    June 30, 2025

    ಸಿನಿಮಾ ಶೈಲಿ ಅಪಹರಣ: ಆರು ಜನರ ಬಂಧನ – ಎನ್ ಶಶಿಕುಮಾರ್

    June 30, 2025

    ಜು.03ರಂದು ಬೀದರ್ ಜಿಲ್ಲೆಗೆ ನಿಖಿಲ್ ಕುಮಾರಸ್ವಾಮಿ ಆಗಮನ: ರಮೇಶ್ ಪಾಟೀಲ್ ಸೋಲ್ಪೂರ್

    June 30, 2025

    ಧಾರವಾಡ: ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಜೆಡಿಎಸ್ ಪ್ರತಿಭಟನೆ

    June 30, 2025

    2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ದರಾಮಯ್ಯ

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.