ಮಂಗಳೂರು : ಗಾಂಜಾ ಮತ್ತು ಚರಸ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಿಂದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಖರೀದಿಸಿಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
70 ಲಕ್ಷಕ್ಕೆ ಡೀಲ್, 5 ಲಕ್ಷ ಅಡ್ವಾನ್ಸ್ ; ರಾಜೇಂದ್ರ ಮೇಲೆ ಕೊಲೆಯತ್ನ ಕೇಸ್‌ನ ಸ್ಫೋಟಕ ಆಡಿಯೋ ರಹಸ್ಯ
ನಗರದ ಶಿವಭಾಗ್ 5 ನೇ ಕ್ರಾಸ್ ರಸ್ತೆಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ತೈಸಿರ್ ಇಸ್ಮಾಯಿಲ್ ಹುಸೈನ್ ಹಾಗೂ ರೋಯಸ್ಟನ್ ಕ್ಸವಿಯರ್ ಲೋಬೋ ಎಂಬವರನ್ನು ವಶಕ್ಕೆ ಪಡೆದಿದ್ದು, ಬಂಧಿತರಿಂದ ಸುಮಾರು 8,00,000/- ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಹೈಡ್ರೋವೀಡ್, ಗಾಂಜಾ,ಚರಸ್ ಮತ್ತು ಗಾಂಜಾವನ್ನು ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ಐಷಾರಾಮಿ ಜೀವನ ಸಾಗಿಸುವ ಉದ್ದೇಶದಿಂದ ಮಾದಕ ವಸ್ತು ಮಾರಾಟದ ದಂಧೆಯನ್ನು ನಡೆಸುತ್ತಿದ್ದರು.
ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಿದ್ದಾರ್ಥ ಗೋಯಲ್ ಮತ್ತು ಉಪ ಪೊಲೀಸ್ ಆಯುಕ್ತರಾದ ಕೆ.ರವಿಶಂಕರ್ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ, ಪಿಎಸ್ಐ ನರೇಂದ್ರ, ಎಎಸ್ಐ ಯವರಾದ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.