ಕೋಲಾರ: ಮಾವಿನ ಬೆಲೆ ತೀವ್ರ ಕುಸಿತ ಹಿನ್ನಲೆ ಬೆಂಬಲ ಬೆಲೆ ಆಗ್ರಹಿಸಿ ಶ್ರೀನಿವಾಸಪುರ ಬಂದ್ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾವು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಂದ್ಗೆ ಕರೆ ನೀಡಿದ್ದು, ಮಾವು ಬೆಳೆಗಾರರರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್ಗೆ ಸಾಥ್ ಕೊಟ್ಟಿವೆ.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಮಾವು ಬೆಳೆಗೆ ಬೆಲೆ ಕುಸಿತ ಹಿನ್ನೆಲೆ ಕಂಗಾಲಾಗಿರುವ ಮಾವು ಬೆಳೆಗಾರರು, ಆಂದ್ರಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಬಂದ್ಗೆ ಕರೆ ಕೊಡಲಾಗಿದೆ. ಮಾವು ಬೆಳೆಗಾರರ ಬಂದ್ಗೆ ಬಿಜೆಪಿ, ಜೆಡಿಎಸ್ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಒಂದು ಟನ್ ಮಾವು 3 ರಿಂದ 4 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ.
ಇನ್ನು ಶ್ರೀನಿವಾಸಪುರದಲ್ಲಿ ಮಾವು ರಸ್ತೆಯಲ್ಲಿ ಸುರಿದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸಪುರದ ಬಸ್ ನಿಲ್ದಾಣದಲ್ಲಿ ಮಾವು ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.