ಪಂಜಾಬ್ : ಪಂಜಾಬ್ನಲ್ಲಿ ಬಿಜೆಪಿ ನಾಯಕ ಮನೆ ಎದುರು ಭಾರೀ ಸ್ಫೋಟ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜಲಂಧರ್ ನ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಅವರ ನಿವಾಸದ ಎದುರು ಭಾರೀ ಸ್ಫೋಟ ಸಂಭವಿಸಿದೆ. ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ಶಬ್ಧಕ್ಕೆ ಗಾಢ ನಿದ್ರೆಯಲ್ಲಿದ್ದ ಜನರು ಬೆಚ್ಚಿ ಬಿದ್ದಿದ್ದಾರೆ.
ಇನ್ನೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಗ್ರೇನೇಡ್ ದಾಳಿಯೇ ಅಥವಾ ಮತ್ತಿತರ ವಸ್ತುಗಳಿಂದ ಸಂಭವಿಸಿದ ಸ್ಫೋಟವೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
Shocking News: ಸಿಂಗಾಪುರ ಶಾಲೆಯಲ್ಲಿ ಬೆಂಕಿ ಅವಘಡ – ನಟ ಪವನ್ ಕಲ್ಯಾಣ್ ಪುತ್ರ ಗಂಭೀರ! ಘಟನೆ ಹೇಗಾಯ್ತು?
ಈ ಬಗ್ಗೆ ಬಿಜೆಪಿ ನಾಯಕ ಮನೋರಂಜನ್ ಪ್ರತಿಕ್ರಿಯಿಸಿದ್ದು, ರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟದ ಶಬ್ಧ ಕೇಳಿಸಿತು. ಈ ವೇಳೆ ಎಲ್ಲರೂ ಮಲಗಿದ್ದೆವು. ಭೂಮಿಯೇ ನಡುಗಿದ ಶಬ್ಧ ಕೇಳಿಸಿತು. ನಂತರವೇ ಸ್ಫೋಟ ಎಂಬ ವಿಚಾರ ನನ್ನ ಗಮನಕ್ಕೆ ಬಂದಿತು. ಬಳಿಕ ನನ್ನ ಗನ್ ಮ್ಯಾನ್ ಅನ್ನು ಪೊಲೀಸ್ ಠಾಣೆಗೆ ಕಳುಹಿಸಿದೆ. ಸಿಸಿಟಿವಿ ತನಿಖೆ ನಡೆಸಲಾಗುತ್ತಿದೆ. ವಿಧಿವಿಜ್ಞಾನ ತಜ್ಞರು ಸಹ ಸ್ಥಳದಲ್ಲಿದ್ದಾರೆ ಎಂದರು.