ಮುಂಬೈನ ವಾಂಖಡೇ ಕ್ರೀಡಾಂಗಣದಲ್ಲಿ ಇಂದು ಮುಂಬೈ ಇಂಡಿಯನ್ಸ್, ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ನಡೆಯಲಿದೆ. ಆದರೆ, ಈ ಪ್ರಮುಖ ಪಂದ್ಯದಲ್ಲಿ ಮಳೆಯ ವಾತಾವರಣ ಕಾಣಿಸುತ್ತಿದೆ. ಭಾರತೀಯ ವಾತಾವರಣ ಇಲಾಖೆಯಲ್ಲಿ ಮುಂಬರುವ ನಾಲ್ಕು ದಿನಗಳು ಎಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ, ಈ ಪಂದ್ಯ ಕೂಡ ಮಳೆಯಿಂದ ರದ್ದಾಗಬಹುದು. ಪಂದ್ಯ ರದ್ದು ಆದರೆ ಯಾವುದು ಪ್ಲೇಆಫ್ಸ್‌ಗೆ ಅರ್ಹತೆ ಸಾಧಿಸುತ್ತದೆಯೋ ಈಗ ತಿಳಿದುಕೊಳ್ಳೋಣ..
ಪಂದ್ಯವು ಮಳೆಗೆ ಆಹುತಿಯಾದರೆ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗುತ್ತದೆ. ಇದರಿಂದ ಮುಂಬೈ ಇಂಡಿಯನ್ಸ್ ತಂಡದ ಪಾಯಿಂಟ್ಸ್ 15 ಕ್ಕೇರಲಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಯಿಂಟ್ಸ್ 14 ಆಗಲಿದೆ.
ಬಿಯರ್ ಕುಡಿದರೆ ಕಿಡ್ನಿ ಸ್ಟೋನ್ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!
ಇದರಿಂದ ಮುಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೂ ಪ್ಲೇಆಫ್ಗೆ ಅರ್ಹತೆ ಪಡೆಯುವುದಿಲ್ಲ. ಬದಲಾಗಿ ಮುಂಬೈ ಇಂಡಿಯನ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುವುದನ್ನು ಡೆಲ್ಲಿ ಪಡೆ ಎದುರು ನೋಡಬೇಕಾಗುತ್ತದೆ.
ಒಂದು ವೇಳೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ, ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೆ ನೇರವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.
ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ಪಾಲಿಗೆ ಇಂದಿನ ಪಂದ್ಯವು ರದ್ದಾಗುವುದು ಬೇಕಾಗಿಲ್ಲ. ಇದೇ ಕಾರಣದಿಂದಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಪಂದ್ಯವನ್ನು ಸ್ಥಳಾಂತರಿಸುವಂತೆ ಮನವಿ ಮಾಡಿದ್ದಾರೆ.