ಧಾರವಾಡ:- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ದಾಳಿಗೆ ಬಲಿಯಾದವರಿಗೆ ಧಾರವಾಡದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ.
ಉಗ್ರರಿಂದ ಬಲಿಯಾದ ಭರತ್ ಭೂಷಣ್ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ: ಕುಟುಂಬಸ್ಥರಿಗೆ ಸಾಂತ್ವನ!
ಯುತ್ ಕಾಂಗ್ರೆಸ್ ಕಾರ್ಯಕರ್ತರಿಂದ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ನಗರದ ಆಲೂರ ವೆಂಕಟರಾವ್ ವೃತ್ತದಲ್ಲಿ ಕ್ಯಾಂಡಲ್ ಮಾರ್ಚ್ ನಡೆದಿದೆ. ಕ್ಯಾಂಡಲ್ ಹಿಡಿದು ಬಲಿಯಾದ ಪ್ರವಾಸಿಗರಿಗೆ ನಮನ ಸಲ್ಲಿಸಿದ್ದಾರೆ. ಕ್ಯಾಂಡಲ್ ಹಿಡಿದು ಕಾರ್ಯಕರ್ತರು ಮೌನವಾಗಿ ನಮನ ಸಲ್ಲಿಸಿದರು. ಜುಬ್ಲಿ ವೃತ್ತದಲ್ಲಿ ಕೆಲ ಹೊತ್ತು ನಿಂತು ನಿಧನ ಹೊಂದಿರುವ ಪ್ರವಾಸಿಗರಿಗೆ ಶ್ರದ್ಧಾಂಜಲಿ ಅರ್ಪಿಸಲಾಗಿದೆ.