ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗಬೆಟ್ಟ ಮುಖ್ಯ ರಸ್ತೆಯ ಪುರಾಣಿ ಪೋಡು ಚೈನ್‌ಗೇಟ್ ಸಮೀಪ ಸೋಮವಾರ ನಡೆದ ಅಪಘಾತದಲ್ಲಿ ಮಿನಿ ಬಸ್‌ವೊಂದು ಪಲ್ಟಿಯಾಗಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ತುಮಕೂರು ಮೂಲದ ಒಂದೇ ಕುಟುಂಬದ ಸದಸ್ಯರು ಮತ್ತು ಅವರ ಸ್ನೇಹಿತರು ಒಟ್ಟಾರೆ 17 ಮಂದಿ ಬಿಳಿಗಿರಿರಂಗಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಮುಗಿಸಿಕೊಂಡು ವಾಪಾಸಾಗುತ್ತಿದ್ದ ಸಂದರ್ಭದಲ್ಲಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿದೆ.
ಅಪಘಾತದಲ್ಲಿ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಪೋಲಿಸರ ಸಹಾಯದಿಂದ ಯಳಂದೂರು ಮತ್ತು ಚಾಮರಾಜನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.