ಬೆಂಗಳೂರು:- ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲು ಸ್ವೀಕರಿಸಿರುವ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.
ಹಿಂದೂಗಳು ಹೆದರಿ ಬದುಕಬೇಕಾದ ಸ್ಥಿತಿ ನಿರ್ಮಾಣ ; ಹತ್ಯೆಗೊಳಗಾದ ಸುಹಾಶ್ ಶೆಟ್ಟಿ ತಾಯಿ
ರಾಜೀನಾಮೆ ಪತ್ರದಲ್ಲಿ ಏನಿದೆ?
ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ಅವರು ನಮ್ಮ ಪೂರ್ವಜರ ಮನೆತನದ ಹೆಸರಿನ ಬಗ್ಗೆ ತಪ್ಪಾಗಿ ಮಾತನಾಡಿದ್ದರು. ಅವರೂ ಸಹ ರಾಜೀನಾಮೆ ನೀಡಿ ಅದು ಅಂಗೀಕಾರವಾದರೆ ಮಾತ್ರ ತಮ್ಮ ರಾಜೀನಾಮೆಯನ್ನು ಸ್ವೀಕರಿಸಬೇಕು ಎಂದು ಶಿವಾನಂದ ಪಾಟೀಲ ಹೇಳಿದ್ದಾರೆ.
ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ, ಬಸನಗೌಡ ಆರ್. ಪಾಟೀಲ್ ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ’’ ಎಂದು ಸ್ಪೀಕರ್ ಯುಟಿ ಖಾದರ್ಗೆ ಬರೆದ ಪತ್ರದಲ್ಲಿ ಶಿವಾನಂದ ಪಾಟೀಲ್ ಉಲ್ಲೇಖಿಸಿದ್ದಾರೆ.