ಬೆಂಗಳೂರು: ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಪರೀಕ್ಷೆಯೊಂದಕ್ಕೆ ಹಾಜರಾಗುವವರು ಮಂಗಳಸೂತ್ರ, ಧಾರ್ಮಿಕ ಸಂಕೇತಗಳನ್ನು ತೆಗೆದು ಹಾಜರಾಗಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿರುವುದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು.
ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ಟಿಕೆಟ್ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಎಕ್ಸ್ ಸಂದೇಶದ ಮೂಲಕ ಬ್ರಿಜೇಶ್ ಚೌಟ ಸ್ಪಷ್ಟಪಡಿಸಿದ್ದಾರೆ.