ಬೀದರ್ : ಬೀದರ ಜಿಲ್ಲೆಯ ಭಾಲ್ಕಿ ತಾಲುಕಿನ ಗ್ರಾಮವೂಂದರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದರೂ ಇನ್ನೂ ಆರೋಪಿಯ ಬಂಧನವಾಗಿಲ್ಲ.
ಲವ್ ಜಿಹಾದ್‌ಗೆ ಹೋಲುವಂತ ಈ ಪ್ರಕರಣವನ್ನು ಮುಚ್ಚಿ ಹಾಕಲು ಜಿಲ್ಲಾ ಉಸ್ತುವಾರಿ ಸಚಿವರು ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಆರೋಪಿಸಿದ್ದಾರೆ.
ಸಂತ್ರಸ್ತ ಬಾಲಕಿ ಕುಟುಂಬಕ್ಕೆ ೨ಲಕ್ಷ ಹಣ ನೀಡುವ ಆಮಿಷ ನೀಡಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಗಂಭಿರ ಆರೋಪ ಮಾಡಿದ್ದಾರೆ. ಭಾಲ್ಕಿ ತಾಲೂಕಿನ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ ಸಮಾಜದ ಯುವಕ ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆದರೆ ಅಪ್ರಾಪ್ತ ಬಾಲಕಿ ಅಪಹರಣಕ್ಕೆ ಕುಮ್ಮಕ್ಕು ನೀಡಿದವರ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖೂಬಾ ಆರೋಪಿಸಿದ್ದಾರೆ.
ಡಾ.ಜಿ ಪರಮೇಶ್ವರ್‌ಗೆ ಇಡಿ ಶಾಕ್ : ಇಡಿ ದಾಳಿ ಹಿಂದಿದೆಯಾ ರನ್ಯಾರಾವ್ ನಂಟು !?
ಪ್ರಕರಣದಲ್ಲಿ ನೊಂದ ಬಾಲಕಿ ಕುಟುಂಬಕ್ಕೆ ಎರಡು ಲಕ್ಷ ಹಣ ನೀಡುವ ಮೂಲಕ ಪ್ರಕರಣ ಮುಚ್ಚಿ ಹಾಕುವುದರಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಖೂಬಾ ವಾಗ್ದಾಳಿ ನಡೆಸಿದ್ದಾರೆ.