ನವದೆಹಲಿ:- ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಸನ್ನಿವೇಶ ದಿನೇ-ದಿನೇ ಗಾಢವಾಗುತ್ತಿದ್ದು, ಮೇ 8ರ ಗುರುವಾರ ಪಾಕಿಸ್ತಾನದಿಂದ ಭಾರತದ ಕಡೆಗೆ ಭಾರೀ ಕ್ಷಿಪಣಿಗಳು ಉಡಾವಣೆಯಾಗಿವೆ. ಜೊತೆಗೆ, ಎಫ್ 16 , ಎಫ್ 17 ಯುದ್ಧ ವಿಮಾನಗಳನ್ನು ಕಳುಹಿಸಲಾಗಿದ್ದು ಅವೆಲ್ಲವನ್ನೂ ಭಾರತ ಹೊಡೆದುರುಳಿಸಿದೆ. ಈ ನಡುವೆ ಫೈಟರ್ ಜೆಟ್ ನಲ್ಲಿದ್ದ ಪೈಲಟ್ ಒಬ್ಬನ್ನು ಭಾರತೀಯ ಸೇನಾ ಪಡೆಗಳು ಸೆರೆ ಹಿಡಿದಿವೆ.
ಭಾರತದ ಮಿಸೈಲ್ ದಾಳಿಗೆ ಪಾಕ್ ಪ್ರಧಾನಿ ಶೇಕ್.. ಶೆಹಬಾಜ್ ಶರೀಫ್ ಮನೆ ಬಳಿಯೇ ದಾಳಿ!
ಭಾರತದ ಆಪರೇಷನ್ ಸಿಂಧೂರ್ ಗೆ ಪ್ರತ್ಯುತ್ತರವಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ಮಾಡಲಾರಂಭಿಸಿದೆ. ಮೇ 8ರ ರಾತ್ರಿಯಿಂದಲೇ ಪಾಕಿಸ್ತಾನದ ಕಡೆಯಿಂದ ಅನೇಕ ಕ್ಷಿಪಣಿಗಳು ಭಾರತದ ಜಮ್ಮು ಕಡೆಗೆ ಹಾರಿಬಂದಿದ್ದು ಅವುಗಳನ್ನು ಭಾರತದಲ್ಲಿರುವ ಕ್ಷಿಪಣಿ ನಿಗ್ರಹ ವ್ಯವಸ್ಥೆಯ ಸಹಾಯದಿಂದ ಮಾರ್ಗಮಧ್ಯದಲ್ಲೇ ಹೊಡೆದುರುಳಿಸಲಾಗಿದೆ. ಈ ದಾಳಿಗಳಲ್ಲಿ ಹಮಾಸ್ ಮಾದರಿಯ ಕ್ಷಿಪಣಿಗಳನ್ನು ಪಾಕಿಸ್ತಾನ ಉಡಾಯಿಸಿದೆ ಎಂದು ಹೇಳಲಾಗಿದೆ.
ಜಮ್ಮುವನ್ನು ಗುರಿಯಾಗಿಸಿಕೊಂಡು ಮತ್ತೆ ಪಾಕಿಸ್ತಾನ ದಾಳಿ ನಡೆಸಿದ್ದು, ಕ್ಷಿಪಣಿಗಳನ್ನು ಬಳಸಿಕೊಂಡು ಹಮಾಸ್ ಸ್ಟೈಲ್‌ನಲ್ಲಿ ಪಾಕ್ ಆರ್ಮಿ ಆಟ್ಯಾಕ್ ಆರಂಭಿಸಿದೆ.
ಆದರೆ ಭಾರತದ ಏರ್ ಡಿಫೆನ್ಸ್ ಯೂನಿಟ್‌ನಿಂದ ಪಾಕ್‌ನ ಎಲ್ಲ ಕ್ಷಿಪಣಿಗಳನ್ನು ಉಡೀಸ್ ಮಾಡಿದೆ. ಇಸ್ರೇಲ್ ಮೇಲೆ ಹಮಾಸ್ ದಾಳಿಯ ಮಾದರಿಯಲ್ಲಿ ಪಾಕ್ ಅರ್ಮಿ ದಾಳಿ ನಡೆಸಿದೆ. ಆದರೆ ಭಾರತದ ದಾಳಿಗೆ ಪಾಕ್ ಆರ್ಮಿ ಆಟ ನಡೆಯದಂತಾಗಿದೆ. ದಾಳಿ ಆರಂಭವಾಗುತ್ತಿದ್ದಂತೆ ಭಾರೀ ಶಬ್ದಕ್ಕೆ ಬೆಚ್ಚಿ ಬಿದ್ದು, ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಜಮ್ಮುವಿನ ಮೇಲೆ ಹಾಕಿಸಿದ್ದು, ನಗರದಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದಿವೆ. ದಾಳಿಗೆ ಭಾರತವು ತಕ್ಕ ಪ್ರತ್ಯುತ್ತರ ನೀಡಿದೆ. ಭಾರತದಲ್ಲಿ ಯಾವುದೇ ಹಾನಿಯಾಗಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.
ಜಮ್ಮುವಿನಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದವು. ನಂತರ ಸೈರನ್‌ಗಳ ಕೂಗು ಕೇಳಿಬಂತು. ತಕ್ಷಣ ವಿದ್ಯುತ್ ಕಡಿತವಾಯಿತು. ದಾಳಿ ಇನ್ನೂ ಮುಂದುವರಿದಿದೆ. ಪರಿಣಾಮವಾಗಿ ಸೆಲ್‌ಫೋನ್ ಸೇವೆ ಸ್ಥಗಿತಗೊಂಡಿದೆ.