ಶಿಲ್ಲಾಂಗ್:- ಮೇಘಾಲಯಕ್ಕೆ ಹನಿಮೂನ್ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯನ್ನು ಅರೆಸ್ಟ್ ಮಾಡಲಾಗಿದೆ. ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪದಡಿ ಉತ್ತರ ಪ್ರದೇಶದ ಗಾಜಿಪುರದಲ್ಲಿ ಪತ್ನಿಯನ್ನು ಬಂಧಿಸಲಾಗಿದೆ.
ರಾಜಾ ರಘುವಂಶಿ ಕೊಲೆಯಾದ ಗಂಡ. ಹತ್ಯೆಗೆ ಸಂಬಂಧಿಸಿದಂತೆ ಪತ್ನಿ ಸೋನಮ್ ರಘುವಂಶಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಸೋನಮ್ ಕೊಲೆಗಾರರನ್ನು ನೇಮಿಸಿಕೊಂಡು ಹನಿಮೂನ್ ಸಮಯದಲ್ಲಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿದ್ದಾರೆ. ಈ ಬಗ್ಗೆ ಮೇಘಾಲಯ ಡಿಜಿಪಿ ಇದಶಿಶಾ ನೊಂಗ್ರಾಂಗ್ ಸ್ಪಷ್ಟಪಡಿಸಿದರು.
ಸೋನಮ್ ತನ್ನ ಪತಿ ರಾಜಾ ಜೊತೆ ಹನಿಮೂನ್ ಆಚರಿಸಲು ಶಿಲ್ಲಾಂಗ್ಗೆ ಹೋಗಿದ್ದರು. ಆದರೆ ನಂತರ ಇಬ್ಬರೂ ನಾಪತ್ತೆಯಾಗಿದ್ದರು.ಕುಟುಂಬವು ಪೊಲೀಸರಿಗೆ ದೂರು ನೀಡಿದಾಗ, ದಂಪತಿಗಾಗಿ ಹುಡುಕಾಟ ಪ್ರಾರಂಭವಾಯಿತು. ಜೂನ್ 2 ರಂದು ರಾಜಾ ರಘುವಂಶಿ ಅವರ ಶವ ಪತ್ತೆಯಾಗಿತ್ತು. ಆದರೆ ಸೋನಮ್ ಬಗ್ಗೆ ಯಾವುದೇ ಸುಳಿವು ಇರಲಿಲ್ಲ.
ಒಬ್ಬ ವ್ಯಕ್ತಿಯನ್ನು ಉತ್ತರ ಪ್ರದೇಶದಿಂದ ಮತ್ತು ಇನ್ನಿಬ್ಬರು ಆರೋಪಿಗಳನ್ನು ಇಂದೋರ್ನಿಂದ ಬಂಧಿಸಲಾಗಿದೆ. ಸೋನಮ್ ನಂದಗಂಜ್ ಪೊಲೀಸ್ ಠಾಣೆಯಲ್ಲಿ ಶರಣಾದರು ಮತ್ತು ನಂತರ ಅವರನ್ನು ಬಂಧಿಸಲಾಯಿತು.
ನವವಿವಾಹಿತರಾದ ರಾಜಾ ರಘುವಂಶಿ ಮತ್ತು ಅವರ ಪತ್ನಿ ಸೋನಮ್, ಮೇ 23 ರಂದು ಕಾಣೆಯಾಗುವ ಮೊದಲು ಮೇಘಾಲಯದಲ್ಲಿ ತಮ್ಮ ಹನಿಮೂನ್ ಸಮಯದಲ್ಲಿ ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ್ದರು. ಜೂನ್ 2 ರಂದು ರಾಜಾ ರಘುವಂಶಿ ಅವರ ಮೃತದೇಹ ಪತ್ತೆಯಾಗಿದ್ದರೂ, ಅವರ ಪತ್ನಿಗಾಗಿ ಹುಡುಕಾಟ ನಡೆಯುತ್ತಿತ್ತು. ಈ ಹನಿಮೂನ್ ಕೊಲೆ ಪ್ರಕರಣವನ್ನು ಭೇದಿಸಿದ್ದಕ್ಕಾಗಿ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಪೊಲೀಸರನ್ನು ಶ್ಲಾಘಿಸಿದ್ದಾರೆ.