ನವದೆಹಲಿ: ಪಹಲ್ಗಾಮ್ ನಲ್ಲಿ 26 ಭಾರತೀಯರ ಹತ್ಯೆಗೆ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರರ ನೆಲೆ ಉಡೀಸ್ ಮಾಡಿದ ಭಾರತೀಯ ಸೇನೆ ಸಾಹಸಕ್ಕೆ ದೇಶಾದ್ಯಂತ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.
ಪಾಕಿಸ್ತಾನಕ್ಕೆ ಮುಟ್ಟಿಕೊಳ್ಳುವಂತೆ ನುಗ್ಗಿ ಹೊಡೆಯುತ್ತೇವೆ ಎಂದು ಎಚ್ಚರಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮೀಡ್ ನೈಟ್ ಆಪರೇಷನ್ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಉಡೀಸ್ ಮಾಡಿದೆ.
ಬಹಳ ರಹಸ್ಯವಾಗಿ ನಡೆದ Operation Sindoor ಕಾರ್ಯಾಚರಣೆಯಲ್ಲಿ 100ಕ್ಕೂ ಉಗ್ರರು ಹತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಹಾಗೂ ಸೇನಾಪಡೆಗಳ ಅಧಿಪತಿಯೂ ಆಗಿರುವ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಸೇನಾ ಕಾರ್ಯಾಚರಣೆಯ ಇಂಚಿಂಚೂ ಮಾಹಿತಿಯನ್ನು ನೀಡಿದ್ದಾರೆ.
ಜಮೀರ್ ಪಾಕ್ ಬದಲು ಕಾಂಗ್ರೆಸ್ ಐಟಿ ಸೆಲ್ ಗೆ ಬಾಂಬ್ ಕಟ್ಟಿಕೊಂಡು ಹೋಗಲಿ: ಆರ್ ಅಶೋಕ್ ವ್ಯಂಗ್ಯ
ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಟಾಶ್ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ಸಚಿವ ಸಂಪುಟ ಸಭೆ ನಡೆಸಿದರು. ನಂತರ ರಾಷ್ಟ್ರಪತಿ ಭವನಕ್ಕೆ ತೆರಳಿ ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ಬಗ್ಗೆ ವಿವರಿಸಿದರು.