ಹೈದರಾಬಾದ್:- ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಏ.28ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಇಂದಿನಿಂದ 2 ದಿನ ಮೋದಿ ಸೌದಿ ಅರೇಬಿಯಾ ಪ್ರವಾಸ: ವ್ಯಾಪಾರ, ಹೂಡಿಕೆ, ತಂತ್ರಜ್ಞಾನದ ಕುರಿತು ಮಾತುಕತೆ
ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಮೇಲೆ ಹಣ ಅಕ್ರಮ ವಹಿವಾಟು ತಡೆ ಕಾಯ್ದೆ ಅಡಿ ಇಡಿ ಪ್ರಕರಣ ದಾಖಲಿಸಿ ದಾಳಿ ನಡೆಸಿತ್ತು. ಈ ಕಂಪನಿಗಳ ಜಾಹೀರಾತಿನಲ್ಲಿ ಮಹೇಶ್ ಬಾಬು ನಟಿಸಿದ್ದರು.
ನಟಿಸಿದ್ದಕ್ಕೆ ಮಹೇಶ್ ಬಾಬು ಅವರಿಗೆ 5.9 ಕೋಟಿ ರೂ. ಸಂಭಾವನೆ ಸಿಕ್ಕಿತ್ತು. ಈ ಪೈಕಿ 3.4 ಕೋಟಿ ರೂ. ಚೆಕ್ ಮೂಲಕ ಮತ್ತು 2.5 ಕೋಟಿ ರೂ. ನಗದು ಮೂಲಕ ಪಾವತಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ನಗದು ವಹಿವಾಟಿನ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಮಹೇಶ್ ಬಾಬು ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.