ಬೆಂಗಳೂರು:- ಕರ್ನಾಟಕದಲ್ಲಿ ಜುಲೈ 12ರವರೆಗೂ ಮಳೆ ಆರ್ಭಟ ಮುಂದುವರೆಯಲಿದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನ ಈ 3 ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ!
ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪ. ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್ನಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಮಳೆಯಾಗಿದೆ. ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.