ಬೆಂಗಳೂರು:- ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ ಜೋರಾಗಲಿದ್ದು, ಕರಾವಳಿಯಲ್ಲಿ ಜೋರು ಮಳೆ ಆದ್ರೆ ಉಳಿದೆಡೆ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಸರ್ಕಾರಿ ಕಚೇರಿಯಲ್ಲೇ ಮೋಜು ಮಸ್ತಿ: ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಗೃಹರಕ್ಷಕದಳ ಅಧಿಕಾರಿಯ Video Viral
ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 20.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.