ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಮೇಲ್ಸೇತುವೆಗಳಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ 6 ವರೆಗೆ ಸಂಚಾರ ನಿಷೇಧಿಸಿದ್ದಾರೆ. ಕೆಆರ್ ಮಾರುಕಟ್ಟೆ, ಶಾಂತಿನಗರ ಡಬಲ್ ರೋಡ್ ಫ್ಲೈಓವರ್ ಸೇರಿದಂತೆ ನಗರದ ಎಲ್ಲ ಪ್ರಮುಖ ಮೇಲ್ಸೇತುವೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಬಂದ್ ಮಾಡಿದ್ದಾರೆ.
ಚೆನ್ನೈ ವಿರುದ್ಧ ಭರ್ಜರಿ ಗೆಲುವು: ಆರ್ಸಿಬಿಗೆ ಶುಭ ಕೋರಿದ ವಿಜಯ್ ಮಲ್ಯಾ!
ಮಾರ್ಕೆಟ್, ರಿಚ್ಮಂಡ್ ರಸ್ತೆ, ಪೀಣ್ಯ ಪ್ಲೈಓವರ್ ಸೇರಿದಂತೆ ನಗರದ ಪ್ರಮುಖ ಪ್ಲೈಓವರ್ ಗಳಲ್ಲಿ ರಾತ್ರಿ ಸಂಚಾರವನ್ನು ಬಂದ್ ಮಾಡಲಾಗಿದೆ. ವಾರದ ಕೊನೆಯಲ್ಲಿ ಸಾಲು ಸಾಲು ಹಬ್ಬಗಳು ಬರ್ತಿದ್ದು, ನಗರಕ್ಕೆ ಆಗಮಿಸುವ ವಾಹನಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ.
ರಾತ್ರಿ ವೇಳೆ ಅತಿವೇಗದ ಚಾಲನೆ, ಅಪಾಯಕಾರಿ ರೈಡಿಂಗ್ ಹಾಗೂ ವ್ಹೀಲಿಂಗ್ ಮಾಡುವ ಸಾಧ್ಯತೆ ಇದೆ. ಇದರಿಂದ ವಾಹನ ಸವಾರರಿಗೆ ತೊಂದರೆ ಜೊತೆಗೆ ಅಪಘಾತಗಳು ಹೆಚ್ಚಾಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲಾ ಫ್ಲೈಓವರ್ ಗಳನ್ನ ಸಂಚಾರಿ ಪೊಲೀಸರು ಬಂದ್ ಮಾಡಿದ್ದಾರೆ.