ತೇಜಸ್ವಿ ಸೂರ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಮದುವೆ ನಡೆದಿದೆ.
ಮದುವೆಗೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.
ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ದವು.
ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ.
ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ.