Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Guarantee Scheme: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳ ಬಗ್ಗೆ ಅನುಷ್ಠಾನ ವರದಿ!

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಸಭೆಯ ಮುಖ್ಯಾಂಶಗಳು

    ಶಕ್ತಿ ಯೋಜನೆ

    ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ.

    ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ದಿಂದ ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ.

    ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

    ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

    ಅನ್ನಭಾಗ್ಯ

    ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ

    12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ

    7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಯಿತು.

    ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು

    ಗೃಹ ಜ್ಯೋತಿ

    ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ.

    *ಆಗಸ್ಟ್‌ ನಿಂದ ಈ ವರೆಗೆ 2900 ಕೋಟಿ ರೂ. ಭರಿಸಲಾಗಿದೆ.
    ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿಯೇ ಗೃಹ ಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗಬಾರದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು*

    ಗೃಹಲಕ್ಷ್ಮಿ ಯೋಜನೆ

    ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ

    *ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಲು ಸೂಚಿಸಿದರು.

    ಡಿಸೆಂಬರ್‌ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಲು ಸೂಚಿಸಿದರು.

    ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಬಿಎಂಟಿಸಿ ಬಸ್ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು!

    June 8, 2025

    ಸೂಟ್​ಕೇಸ್​ನಲ್ಲಿ ಬಾಲಕಿ ಶವ ಪತ್ತೆ ಕೇಸ್: ಪ್ರಕರಣ ಬೇಧಿಸಿದ ಪೊಲೀಸರಿಗೆ ಅಚ್ಚರಿ ಮಾಹಿತಿ ರಿವೀಲ್!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025

    ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

    June 8, 2025

    ಕಾಲ್ತುಳಿತ ಕೇಸ್: ಇದೊಂದು ಬೇವರ್ಸಿ ಸರ್ಕಾರ- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆರ್ ಅಶೋಕ್!

    June 8, 2025

    ಬೆಂಗಳೂರಿನಲ್ಲಿ ನಕಲಿ ಸಿಗರೇಟ್ ಮಾರಾಟ: ಕೇರಳ ಮೂಲದ ಇಬ್ಬರು ಅರೆಸ್ಟ್!

    June 8, 2025

    ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕು: 5 ದಿನ ವ್ಯಾಪಕ ಮಳೆ ಸಾಧ್ಯತೆ!

    June 8, 2025

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.